ಬಿಜೆಪಿಯವರ ಅಪ ಪ್ರಚಾರಕ್ಕೆ ಯಾರೂ ಕಿವಿಗೊಡಬೇಡಿ : ಜಯಸಿಂಹ

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 11 : ಕಾರ್ಯಕರ್ತರು ಸಂಘಟಿತರಾದಾಗ ಮಾತ್ರ ಸರ್ಕಾರ ಅಧಿಕಾರಕ್ಕೆ ಬರಲು ಸಾಧ್ಯ ಎಂದು ಸಣ್ಣ ನೀರಾವರಿ, ವಿಜ್ಞಾನ, ತಂತ್ರಜ್ಞಾನ ಸಚಿವ ಬೋಸರಾಜು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮಂಗಳವಾರ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾರ್ಯಕರ್ತರು ಸದಸ್ಯರುಗಳಾಗುವ ಅವಕಾಶವಿದೆ. ಎಲ್ಲರೂ ಶಾಸಕರು, ಸಚಿವರಾಗುವುದು ಕಷ್ಟ. ಭಿನ್ನಾಭಿಪ್ರಾಯಗಳನ್ನು ಬಿಟ್ಟು ಒಗ್ಗಟ್ಟಾಗಿದ್ದರೆ ಪಕ್ಷಕ್ಕೆ ಅನುಕೂಲವಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳು ಆಯಾ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಜವಾಬ್ದಾರಿ ಕೊಟ್ಟಿದ್ದಾರೆ. ಏನಾದರೂ ಸಮಸ್ಯೆಗಳಿದ್ದರೆ ನಾಯಕರುಗಳ ಗಮನಕ್ಕೆ ತನ್ನಿ. ಇಲಾಖೆಯ ಕೆಲಸಗಳೇನಾದರೂ ಇದ್ದಲ್ಲಿ ಪ್ರಾಮಾಣಿಕವಾಗಿ ಮಾಡಲು ಸಿದ್ದನಿದ್ದೇನೆಂದು ಹೇಳಿದರು.

ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಬ್ರಾಹ್ಮಣರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯಸಿಂಹ ಮಾತನಾಡಿ ಸರ್ವ ಧರ್ಮವನ್ನು ಗೌರವಿಸುವ ಪಕ್ಷ ಕಾಂಗ್ರೆಸ್‍ನಿಂದ ಮಾತ್ರ ಎಲ್ಲಾ ಜಾತಿ ಧರ್ಮದವರಿಗೂ ಸಾಮಾಜಿಕ ನ್ಯಾಯ ನೀಡಲು ಸಾಧ್ಯ. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ಉಚಿತ ಗ್ಯಾರೆಂಟಿಗಳನ್ನು ಬಡವರಿಗೆ ನೀಡಿದ್ದಾರೆ. ಕೋಮುವಾದಿ ಬಿಜೆಪಿಯವರ ಅಪ ಪ್ರಚಾರಕ್ಕೆ ಯಾರು ಕಿವಿಗೊಡುವುದು ಬೇಡ ಎಂದು ಕಾರ್ಯಕರ್ತರನ್ನು ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಜಿಲ್ಲೆಯಲ್ಲಿರುವ ಕೆರೆಗಳ ಅಭಿವೃದ್ದಿ ಸಮಿತಿಗೆ ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೆ ಆದ್ಯತೆ ನೀಡಿ ನೇಮಕ ಮಾಡುವಂತೆ ಸಚಿವ ಬೋಸರಾಜುರವರಲ್ಲಿ ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಉಪಾಧ್ಯಕ್ಷರುಗಳಾದ ಎಸ್.ಎನ್.ರವಿಕುಮಾರ್, ನಜ್ಮತಾಜ್, ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತ ನಂದಿನಿಗೌಡ

ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವಿಭಾಗದ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಸೈಯದ್ ಮೊಹಿದ್ದೀನ್, ಕಾರ್ಯದರ್ಶಿ ಪರ್ವಿನ್, ನಗರಸಭೆ ಸದಸ್ಯ ನರಸಿಂಹಮೂರ್ತಿ, ಇಂದಿರಾ, ಸೇವಾದಳದ ಜಿಲ್ಲಾಧ್ಯಕ್ಷ ಭೂತೇಶ್, ಸೈಯದ್ ವಲಿಖಾದ್ರಿ, ಮುದಸಿರ್‍ನವಾಜ್, ಪ್ರಕಾಶ್‍ರಾಮನಾಯ್ಕ, ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

suddionenews

Recent Posts

ತಂತ್ರಜ್ಞಾನ ಆಧಾರಿತ ಭೋದನಾ ಸಾಧನಗಳನ್ನು ಅಳವಡಿಸಿಕೊಳ್ಳಿ : ಎನ್.ಆರ್. ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಶ್ರೀಧರ್, ತುರುವನೂರು ಮೊ: 78997 89545 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 11 :…

1 hour ago

AI ತಂತ್ರಜ್ಞಾನಗಳಿಂದ ಜಗತ್ತು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ : ಪ್ರಧಾನಿ ಮೋದಿ

ಸುದ್ದಿಒನ್ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ನಡೆದ AI ಕ್ರಿಯಾ ಶೃಂಗಸಭೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ…

4 hours ago

ಸರ್ಕಾರ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ: ಶಾಸಕ ಎಸ್.ಆರ್.ಶ್ರೀನಿವಾಸ್

  ಗುಬ್ಬಿ: ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ಎಂಬ ಸಲ್ಲದ ಆರೋಪ ಮಾಡುವ ವಿರೋಧಪಕ್ಷ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ…

4 hours ago

ವೀಲ್ ಚೇರ್ ನಲ್ಲಿ ಬಂದ ಸಿಎಂ: ಸಿದ್ದರಾಮಯ್ಯ ಅವರ ಆರೋಗ್ಯ ಈಗ ಹೇಗಿದೆ..?

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಎಡಗಾಲಿನ ಮಂಡಿನೋವು ಕಾಣಿಸಿಕೊಂಡ ಕಾರಣ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಒಂದೆರಡು…

4 hours ago

ಗ್ಯಾರಂಟಿ ಯೋಜನೆಗಳ ಜಾಗೃತಿ ವಾಹನಕ್ಕೆ ಚಾಲನೆ

    ಚಿತ್ರದುರ್ಗ. ಫೆ.11: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಾಗೃತಿ ಮೂಡಿಸುವ ಎಲ್‍ಇಡಿ ವಾಹನಕ್ಕೆ ಜಿಲ್ಲಾ ಗ್ಯಾರಂಟಿ…

4 hours ago

ಸೈಬರ್ ಮೋಸದ ಜಾಲಕ್ಕೆ ಸಿಲುಕಬೇಡಿ : ಜಿಪಂ ಸಿಇಒ ಸೋಮಶೇಖರ್

    ಚಿತ್ರದುರ್ಗ. ಫೆ.11: ದೇಶದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಾದಂತೆ ಅಂತರ್ಜಾಲದಲ್ಲಿ ವಂಚನೆ ಮಾಡುವವರು ಕೂಡ ಹೆಚ್ಚಾಗುತ್ತಿದ್ದು, ಹೀಗಾಗಿ ಎಚ್ಚರ…

5 hours ago