Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಲ್ಲವಿಯನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯಗಳ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 15 : ಅಲೆಮಾರಿ, ಅರೆ ಅಲೆಮಾರಿ(ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ) ನಿಗಮದ ಅಧ್ಯಕ್ಷೆ ಪಲ್ಲವಿಯನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಜಿಲ್ಲೆಯ 49 ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯಗಳ ವತಿಯಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಪಲ್ಲವಿ ಹಾಗೂ ಅವರ ಆಪ್ತ ಕಾರ್ಯದರ್ಶಿ ಆನಂದ ಏಕಲವ್ಯ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಬೆಂಗಳೂರಿನ ಗಾಂಧಿಭವನದಲ್ಲಿ ಕಳೆದ ಐದರಂದು ಮಾಜಿ ಸಚಿವ ಹೆಚ್.ಆಂಜನೇಯ ನೇತೃತ್ವದಲ್ಲಿ ನಡೆದ 49 ಅಲೆಮಾರಿ ಮತ್ತು ಅರೆಅಲೆಮಾರಿ ಜಾತಿಗಳ ಸಭೆಯಲ್ಲಿ ಏಕಾಏಕಿ ನುಗ್ಗಿದ ಪಲ್ಲವಿ ಹಾಗೂ ಆನಂದ ಏಕಲವ್ಯ ಇವರುಗಳು ಗದ್ದಲ ಉಂಟು ಮಾಡಿ ಅಲೆಮಾರಿ ಸಮುದಾಯಗಳ ಮಧ್ಯೆ ಭಿನ್ನಾಭಿಪ್ರಾಯ ಮೂಡಿಸಿದ್ದಾರೆ. ನೂರಾರು ವರ್ಷಗಳಿಂದಲೂ ಬೀದಿ ಬದಿಯ ಟೆಂಟ್‍ಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗಕ್ಕೆ ಇದುವರೆವಿಗೂ ಸರ್ಕಾರದಿಂದ ಮೂಲಭೂತ ಸೌಲಭ್ಯಗಳು ಸಿಕ್ಕಿಲ್ಲ. ಇಂತಹ ನಿರ್ಲಕ್ಷಿತ ಸಮುದಾಯಗಳ ಅಭಿವೃದ್ದಿಗೆ ಶ್ರಮಿಸಬೇಕೆ ವಿನಃ ಗೊಂದಲ ಸೃಷ್ಠಿಸಬಾರದು. ಹಾಗಾಗಿ ನಿಗಮದ ಅಧ್ಯಕ್ಷೆ ಪಲ್ಲವಿ ಮತ್ತು ಆಪ್ತ ಕಾರ್ಯದರ್ಶಿ ಆನಂದ ಏಕಲವ್ಯ ಇವರುಗಳ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾನಿರತರು ಒತ್ತಾಯಿಸಿದರು.

ಯುವ ವಕೀಲ ಓ.ಪ್ರತಾಪ್‍ಜೋಗಿ, ನಾಗರಾಜ ಕೆ.ಎಂ. ಸುಡುಗಾಡು ಸಿದ್ದ ಜನಾಂಗದ ಮುಖಂಡರುಗಳಾದ ಜಿ.ಕೃಷ್ಣಪ್ಪ, ಜಗಳೂರು ಜಯಣ್ಣ, ಬಿ.ಎಸ್.ಮಂಜಣ್ಣ, ದಕ್ಕಲ್ ಸಮಾಜದ ಜಾನ್ಕಲ್ ರಾಜಣ್ಣ, ಸಿಳ್ಳೆಕ್ಯಾತ ಸಮುದಾಯದ ಜಿಲ್ಲಾಧ್ಯಕ್ಷ ಕೃಷ್ಣಪ್ಪ, ಚನ್ನದಾಸ ಸಮುದಾಯದ ಜಿಲ್ಲಾಧ್ಯಕ್ಷ ರಂಗಪ್ಪ, ನಾಗರಾಜ್, ಪಾಂಡ್ಯಪ್ಪ, ಸತ್ಯಪ್ಪ, ಗುರುಮೂರ್ತಿ, ಸುಧಾಕರ್, ಗಂಗಪ್ಪ, ಬುಡ್ಗ ಜಂಗಮ ಮುಖಂಡರುಗಳಾದ ವಸಂತ, ವಿಭೂತಿ ಮಾರಪ್ಪ, ವೈ.ರಾಘವೇಂದ್ರ, ತಿಪ್ಪೇಸ್ವಾಮಿ, ಸುಡುಗಾಡು ಸಿದ್ದ ಜನಾಂಗದ ಶಿವಣ್ಣ, ಬಾಬು, ಚನ್ನದಾಸ ಸಮುದಾಯದ ಕರಿಯಪ್ಪ, ಬಡ್ಗ ಜಂಗಮ ಸಮಾಜದ ಸಣ್ಣಹುಸೇನ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment