Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಚ್.ಆಂಜನೇಯ ಅವರನ್ನು ವಿಧಾನಪರಿಷತ್‍ಗೆ ನಾಮ ನಿರ್ದೇಶನ ಮಾಡಿ : ಆರ್.ಕೃಷ್ಣಮೂರ್ತಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 23 : ಪಕ್ಷದ ಅಭಿವೃದ್ದಿ ಏಳಿಗೆಗಾಗಿ ಶ್ರಮಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆ ಮಾಜಿ ಸಚಿವ ಹೆಚ್.ಆಂಜನೇಯರವರನ್ನು ವಿಧಾನಪರಿಷತ್‍ಗೆ ನಾಮ ನಿರ್ದೇಶನಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆರ್.ಕೃಷ್ಣಮೂರ್ತಿ ಕಾಂಗ್ರೆಸ್ ನಾಯಕರುಗಳನ್ನು ಒತ್ತಾಯಿಸಿದರು.

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಹೆಚ್.ಆಂಜನೇಯರವರು ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರ ಪರವಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ. ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುವ ನಾಯಕ ರಾಹುಲ್‍ಗಾಂಧಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೆವಾಲ ಇವರುಗಳು ಹೆಚ್.ಆಂಜನೇಯರವರು ಪಕ್ಷಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ವಿಧಾನಪರಿಷತ್‍ಗೆ ನೇಮಕ ಮಾಡಿಕೊಳ್ಳುವಂತೆ ಮನವಿ ಮಾಡಿದರು.

 

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜ ಮಾತನಾಡಿ ಹೆಚ್.ಆಂಜನೇಯರವರು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಶೋಷಿತರ ಪರವಾಗಿ ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬರುತ್ತಿರುವುದರ ಜೊತೆಗೆ ರಾಜ್ಯವನ್ನು ಸುತ್ತಿದ್ದಾರೆ. ಅಂತಹ ನಾಯಕನನ್ನು ವಿಧಾನ ಪರಿಷತ್‍ಗೆ ನಾಮ ನಿರ್ದೇಶನ ಮಾಡಿಕೊಳ್ಳಬೇಕೆಂದು ಆಗ್ರಹಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರುಗಳಾದ ಬಿ.ಪಿ.ಪ್ರಕಾಶ್‍ಮೂರ್ತಿ, ಶಿವಮೂರ್ತಿ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಾವೇರಿ ರಸ್ತೆ ಅಪಘಾತ | 14 ಜನರಲ್ಲಿ ಜನರಲ್ಲಿ ಬದುಕಿದ್ದು ಒಂದೇ ಹುಡುಗಿ..!

ಹಾವೇರಿ: ನಿಂತಿದ್ದ ಲಾರಿಗೆ ಭೀಕರವಾಗಿ ಟಿಟಿ ವಾಹನ ಗುದ್ದಿದ ಪರಿಣಾಮ ವಾಹನದಲ್ಲಿದ್ದ ಹನ್ನೊಂದು ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನೆಲ್ಲಾ ಆಸ್ಪತ್ರೆಗೆ ದಾಖಲಿಸಿತ್ತಾದರೂ ಮತ್ತೆ ಇಬ್ಬರು ಮೃತ ಪಟ್ಟಿದ್ದಾರೆ. ಹದಿನಾಲ್ಕು ಜನರಲ್ಲಿ

ಹಾವೇರಿಯಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ | 13 ಮಂದಿ ಮೃತ, ನಾಲ್ವರ ಸ್ಥಿತಿ ಗಂಭೀರ….!

  ಹಾವೇರಿ, ಜೂನ್​ 28 : ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟಿಟಿ ವಾಹನ ಡಿಕ್ಕಿಯಾಗಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದು, ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. ಜಿಲ್ಲೆಯ ಬ್ಯಾಡಗಿ

ಕೆಂಪು ಸೇಬು, ಹಸಿರು ಸೇಬು : ಮಧುಮೇಹ ರೋಗಿಗಳಿಗೆ ಯಾವುದು ಉತ್ತಮ…!

  ಸುದ್ದಿಒನ್ : ಸೇಬು ಎಲ್ಲರಿಗೂ ಪ್ರಿಯವಾದ ಹಣ್ಣು. ದಿನಕ್ಕೊಂದು ಸೇಬು ತಿನ್ನುವುದರಿಂದ ವೈದ್ಯರನ್ನು ದೂರವಿಡಬಹುದು ಎಂಬ ಮಾತಿದೆ. ಸೇಬು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಕ್ಯಾನ್ಸರ್ ತಡೆಗಟ್ಟುತ್ತದೆ. ಸೇಬು ತಿನ್ನುವುದು ಆರೋಗ್ಯಕ್ಕೆ ಉತ್ತಮ ಆಯ್ಕೆಯಾಗಿದೆ.

error: Content is protected !!