Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹಿಂದೂಯೇತರರಿಗೆ ಅವಕಾಶ ಬೇಡ : ವಿಶ್ವ ಹಿಂದೂ ಪರಿಷತ್, ಬಜರಂಗದಳ ಒತ್ತಾಯ

Facebook
Twitter
Telegram
WhatsApp

ಚಿತ್ರದುರ್ಗ, (ಮಾ.25) : ಜಿಲ್ಲೆಯ ಎಲ್ಲಾ ಹಿಂಧೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಎಲ್ಲಾ ದೇವಸ್ಥಾನ, ಜಾತ್ರಾ ಮಹೋತ್ಸವ, ರಥೋತ್ಸವ ಮತ್ತು ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹಿಂದೂಯೇತರರಿಗೆ ಅವಕಾಶ ಕೊಡಬಾರದು ಹಾಗೂ ದೇವಸ್ಥಾನಕ್ಕೆ ಸಂಬಂಧ ಪಟ್ಟಂತಹ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಹಿಂದೂಯೇತರರಿಗೆ ಭಾಗವಹಿಸದಿರಲು ಕಾನೂನಿನ ಈ ನಿಯಮದ ಪ್ರಕಾರ ಜಾರಿಗೆ ತರಲು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮ 1997ರ ನಿಯಮಗಳು 2002 ಸಂಖ್ಯೆ: 33ರ ಪ್ರಕಾರ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಪಟ್ಟ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಹಿಂದೂಗಳಲ್ಲದವರಿಗೆ (ಅನ್ಯ ಕೋಮಿನವರಿಗೆ)  ಗುತ್ತಿಗೆಯನ್ನು ನೀಡತಕ್ಕದ್ದಲ್ಲ ಎಂಬ ಅಧಿನಿಯಮ ಇದೆ.

ಈ ನಿಯಮದ ಪ್ರಕಾರ ಸ್ಪಷ್ಟವಾಗಿ ಉಲ್ಲೇಖವಿದ್ದ ಕಾರಣ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯು ಕೂಡಲೇ ಜಿಲ್ಲೆಯ ಎಲ್ಲಾ ದೇವಸ್ಥಾನದ ಆಡಳಿತ ಮಂಡಳಿಗೆ ಈ ಆದೇಶವನ್ನು ಹೊರಡಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಿ. ರುದ್ರೇಶ್, ಕೇಶವ್, ಶಶಿಧರ್, ಓಂಕಾರ್, ರೇಣು, ಕಿಶೋರ್, ತೇಜು, ಜಯಂತ್, ದೀಪಕ್ ಹಾಗೂ ಇನ್ನಿತರರು ಭಾಗಿಯಾಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!