ರಾಮನಗರ: ಕಾಂಗ್ರೆಸ್ ನವರ ಮೇಕೆದಾಟು ಪಾದಯಾತ್ರೆಗೆ ಇಂದಿಗೆ ನಾಲ್ಕು ದಿನ. ಮೊದಲ ದಿನವೆರ ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದಕ್ಕೆ ಕಾಂಗ್ರೆಸ್30 ನಾಯಕರ ಮೇಲೆ ಎಫ್ಐಆರ್ ದಾಖಲಾಗಿತ್ತು. ಆದ್ರೆ ಆ ಸಂಖ್ಯೆ ಇದೀಗ ಬದಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ರಾಮನಗರ ಎಸ್ಪಿ ಗಿರೀಶ್, ರಾಜ್ಯ ಸರ್ಕಾರದ ಅನುಮತಿ ಪಡೆಯದೆಯೇ ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ಹಾಕಲಾಗಿದೆ. ಪಾದಯಾತ್ರೆ ವೇಳೆ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ್ದಾರೆ.

ಕನಕಪುರ ತಹಶೀಲ್ದಾರ್ ಅವರು ನೀಡಿದ ದೂರಿನ ಅನ್ವಯ ನಿಯಮ ಉಲ್ಲಂಘಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಡಿ ಕೆ ಸುರೇಶ್ ಸೇರಿದಂತೆ 64 ಕ್ಕೂ ಹೆಚ್ಚು ನಾಯಕರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ.


