Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿರೋಧ ಪಕ್ಷಗಳ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ : ಸಚಿವ ಮಧು ಬಂಗಾರಪ್ಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ.27  : ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಣ ಇಲಾಖೆಯಲ್ಲಿ ಕೆಲವೊಂದು ತೀರ್ಮಾನಗಳನ್ನು ತೆಗೆದುಕೊಂಡಿದ್ದೇವೆ. ವಿರೋಧ ಪಕ್ಷಗಳ ಟೀಕೆಗಳಿಗೆಲ್ಲಾ ತಲೆಕೆಡಿಸಿಕೊಳ್ಳುವುದಿಲ್ಲವೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರೋಧಿಗಳಿಗೆ ತಿರುಗೇಟು ನೀಡಿದರು.

ದುರ್ಗದ ಸಿರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮೂರು ಪದವೀಧರ ಹಾಗೂ ಮೂರು ಆಗ್ನೇಯ ಶಿಕ್ಷಕರುಗಳ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಶಿಕ್ಷಕರುಗಳಲ್ಲಿ ಮಧು ಬಂಗಾರಪ್ಪ ಮನವಿ ಮಾಡಿದರು.

ಪಾರ್ಲಿಮೆಂಟ್ ಚುನಾವಣೆಯಲ್ಲಿಯೂ ನಮ್ಮ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಶಿಕ್ಷಕರು, ಪದವೀಧರರಿಗೆ ಕಾಂಗ್ರೆಸ್ ಸರ್ಕಾರ ಯುವ ನಿಧಿ ಗ್ಯಾರೆಂಟಿಗಳನ್ನು ನೀಡಿದೆ. ಓ.ಪಿ.ಎಸ್.ನಮ್ಮ ಪ್ರಣಾಳಿಕೆಯಲ್ಲಿದೆ. ಮುಂದಿನ ದಿನಗಳಲ್ಲಿ ಈಡೇರಿಸುತ್ತೇವೆ. ಕಳೆದ ಫೆಬ್ರವರಿ, ಮಾರ್ಚ್‍ನಲ್ಲಿ ಹನ್ನೆರಡು ಸಾವಿರ ಶಿಕ್ಷಕರುಗಳನ್ನು ನೇಮಕ ಮಾಡಿಕೊಂಡಿದ್ದೇವೆ. ಮೊದಲಿನಿಂದಲೂ ಶಿಕ್ಷಣಕ್ಕೆ ಹೆಚ್ಚಿನ ಸಹಕಾರ ಕೊಡುತ್ತಿರುವುದು ಕಾಂಗ್ರೆಸ್ ಪಕ್ಷ. ಶಿಕ್ಷಕರುಗಳಿಗೆ ಗಂಭೀರವಾದ ಸಮಸ್ಯೆಗಳಿವೆ. ಹಂತ ಹಂತವಾಗಿ ಎಲ್ಲವನ್ನು ಪರಿಹರಿಸಲಾಗುವುದೆಂದು ಭರವಸೆ ನೀಡಿದರು.

 

ಪಠ್ಯಪುಸ್ತಕ ಪರಿಷ್ಕರಣೆಯಾಗಿ ಶುದ್ದವಾಗಿದೆ. ವಿರೋಧ ಪಕ್ಷದವರು ಬರೀ ಟೀಕೆ ಟಿಪ್ಪಣಿಗಳನ್ನು ಮಾಡಿಕೊಂಡು ಕಾಲ ಕಳೆಯುವುದರಲ್ಲಿ ಅರ್ಥವಿಲ್ಲ. ಅಭಿವೃದ್ದಿಗಾಗಿ ಆಡಳಿತ ಪಕ್ಷದೊಂದಿಗೆ ಕೈಜೋಡಿಸುವುದನ್ನು ಕಲಿಯಬೇಕು. ಅನುದಾನಿತ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಹೇಳಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಿ.ಟಿ.ಶ್ರೀನಿವಾಸ್‍ರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ ವಿಧಾನಪರಿಷತ್‍ಗೆ ಕಳಿಸಿಕೊಡಿ ನಿಮ್ಮ ಸಮಸ್ಯೆಗಳಿಗೆ ಧ್ವನಿಯಾಗಿರುತ್ತಾರೆಂದು ಶಿಕ್ಷಕರುಗಳಲ್ಲಿ ಮನವಿ ಮಾಡಿದರು.

ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮ ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಹನುಮಂತಪ್ಪ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜುಲೈ 20 ರಂದು ಗಿನ್ನಿಸ್ ದಾಖಲೆ ರೀತಿ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಆಚರಣೆ : ಎಸ್.ರವಿಕುಮಾರ್

ಸುದ್ದಿಒನ್, ಚಿತ್ರದುರ್ಗ, ಜುಲೈ. 07 :ಪಕ್ಷಾತೀತವಾಗಿ ಸಮಾಜವನ್ನು ಸಂಘಟಿಸಬೇಕು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಹೇಳಿದರು. ನಗರದ ಹೊರವಲಯದಲ್ಲಿರುವ ಭೋವಿ ಗುರುಪೀಠದಲ್ಲಿ ಭಾನುವಾರ ನಡೆದ ದೀಕ್ಷಾ ರಜತ್ ಮಹೋತ್ಸವದ ಪೂರ್ವಭಾವಿ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತ ಮಹೋತ್ಸವ | ಚಿತ್ರದುರ್ಗ ಭಾವೈಕ್ಯತೆಯ ಊರು, ಶಾಂತಿಯ ತೋಟ : ಎಂ.ಕೆ.ತಾಜ್‍ಪೀರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಜು. 7 :  ಚಿತ್ರದುರ್ಗ ಎಂದರೆ ಭಾವ್ಯಕತ್ಯೆಯ ಶಕ್ತಿಯನ್ನು ಹೊಂದಿದ ಊರಾಗಿದೆ ಇಲ್ಲಿ ಮಠಗಳು, ಮಸೀದಿಗಳು,

ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಎಸ್ಟಿ ವಿಭಾಗದ ಅಧ್ಯಕ್ಷ ಬಿ.ಮಂಜುನಾಥ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಮಂಜುನಾಥ್ ಲೋಕೋಪಯೋಗಿ ಸಚಿವ ಸತೀಶ್‍ಜಾರಕಿಹೊಳಿರವರ

error: Content is protected !!