ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ.27 : ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಣ ಇಲಾಖೆಯಲ್ಲಿ ಕೆಲವೊಂದು ತೀರ್ಮಾನಗಳನ್ನು ತೆಗೆದುಕೊಂಡಿದ್ದೇವೆ. ವಿರೋಧ ಪಕ್ಷಗಳ ಟೀಕೆಗಳಿಗೆಲ್ಲಾ ತಲೆಕೆಡಿಸಿಕೊಳ್ಳುವುದಿಲ್ಲವೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರೋಧಿಗಳಿಗೆ ತಿರುಗೇಟು ನೀಡಿದರು.
ದುರ್ಗದ ಸಿರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮೂರು ಪದವೀಧರ ಹಾಗೂ ಮೂರು ಆಗ್ನೇಯ ಶಿಕ್ಷಕರುಗಳ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಶಿಕ್ಷಕರುಗಳಲ್ಲಿ ಮಧು ಬಂಗಾರಪ್ಪ ಮನವಿ ಮಾಡಿದರು.
ಪಾರ್ಲಿಮೆಂಟ್ ಚುನಾವಣೆಯಲ್ಲಿಯೂ ನಮ್ಮ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಶಿಕ್ಷಕರು, ಪದವೀಧರರಿಗೆ ಕಾಂಗ್ರೆಸ್ ಸರ್ಕಾರ ಯುವ ನಿಧಿ ಗ್ಯಾರೆಂಟಿಗಳನ್ನು ನೀಡಿದೆ. ಓ.ಪಿ.ಎಸ್.ನಮ್ಮ ಪ್ರಣಾಳಿಕೆಯಲ್ಲಿದೆ. ಮುಂದಿನ ದಿನಗಳಲ್ಲಿ ಈಡೇರಿಸುತ್ತೇವೆ. ಕಳೆದ ಫೆಬ್ರವರಿ, ಮಾರ್ಚ್‍ನಲ್ಲಿ ಹನ್ನೆರಡು ಸಾವಿರ ಶಿಕ್ಷಕರುಗಳನ್ನು ನೇಮಕ ಮಾಡಿಕೊಂಡಿದ್ದೇವೆ. ಮೊದಲಿನಿಂದಲೂ ಶಿಕ್ಷಣಕ್ಕೆ ಹೆಚ್ಚಿನ ಸಹಕಾರ ಕೊಡುತ್ತಿರುವುದು ಕಾಂಗ್ರೆಸ್ ಪಕ್ಷ. ಶಿಕ್ಷಕರುಗಳಿಗೆ ಗಂಭೀರವಾದ ಸಮಸ್ಯೆಗಳಿವೆ. ಹಂತ ಹಂತವಾಗಿ ಎಲ್ಲವನ್ನು ಪರಿಹರಿಸಲಾಗುವುದೆಂದು ಭರವಸೆ ನೀಡಿದರು.
ಪಠ್ಯಪುಸ್ತಕ ಪರಿಷ್ಕರಣೆಯಾಗಿ ಶುದ್ದವಾಗಿದೆ. ವಿರೋಧ ಪಕ್ಷದವರು ಬರೀ ಟೀಕೆ ಟಿಪ್ಪಣಿಗಳನ್ನು ಮಾಡಿಕೊಂಡು ಕಾಲ ಕಳೆಯುವುದರಲ್ಲಿ ಅರ್ಥವಿಲ್ಲ. ಅಭಿವೃದ್ದಿಗಾಗಿ ಆಡಳಿತ ಪಕ್ಷದೊಂದಿಗೆ ಕೈಜೋಡಿಸುವುದನ್ನು ಕಲಿಯಬೇಕು. ಅನುದಾನಿತ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಹೇಳಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಿ.ಟಿ.ಶ್ರೀನಿವಾಸ್‍ರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ ವಿಧಾನಪರಿಷತ್‍ಗೆ ಕಳಿಸಿಕೊಡಿ ನಿಮ್ಮ ಸಮಸ್ಯೆಗಳಿಗೆ ಧ್ವನಿಯಾಗಿರುತ್ತಾರೆಂದು ಶಿಕ್ಷಕರುಗಳಲ್ಲಿ ಮನವಿ ಮಾಡಿದರು.
ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮ ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಹನುಮಂತಪ್ಪ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…