Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ವಂತ ಬುದ್ಧಿಯಿಂದ ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ : ಮುತಾಲಿಕ್ ವಿರುದ್ಧ ಸುನಿಲ್ ಕುಮಾರ್ ಕಿಡಿ

---Advertisement---

 

ಉಡುಪಿ: 2023ರ ವಿಧಾನಸಭಾ ಚುನಾವಣೆಯಲ್ಲಿ ಪ್ರಮೋದ್ ಮುತಾಲಿಕ್ ಕೂಡ ಸ್ಪರ್ಧೆಗೆ ಇಳಿದಿದ್ದಾರೆ. ಅವರ ಬೆಂಬಲಿಗರು ಕೂಡ ಬಿಜೆಪಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಅಭ್ಯರ್ಥಿಯನ್ನು ಹಾಕಬೇಡಿ, ಬೇಕಾದಲ್ಲಿ ನಿಮ್ಮ ಪಕ್ಷದಿಂದಾನೇ ಟಿಕೆಟ್ ನೀಡಿ ಎಂದು. ಇದೀಗ ಸುನೀಲ್ ಕುಮಾರ್ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ !
ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ.

ನೀವು ಕಾರ್ಕಳದಿಂದ ಸ್ಪರ್ಧೆಗೆ ಇಳಿಯುವುದನ್ನು ನಾನು ಮೊದಲೇ ಸ್ವಾಗತಿಸಿದ್ದೇನೆ. ಈಗ ನಿಮಗೆ ತನು ಮನ ಧನ ಸಹಾಯ ಮಾಡುವವರೂ ಕಾರ್ಕಳಕ್ಕೆ ಬಂದು ಪ್ರಚಾರ ಮಾಡಲಿ ಎಂದು ನಾನು ಆಶಿಸುತ್ತೇನೆ.
ನಿಮ್ಮ ಸ್ಪರ್ಧೆಯ ಉದ್ದೇಶ ಏನೆಂಬುದನ್ನು ಕೆಲ ದಿನಗಳ ಹಿಂದೆ ” ವೋಟು, ನೋಟು” ಹೇಳಿಕೆಯ ಮೂಲಕ ತಿಳಿಸಿದ್ದಿರಿ.

ಈಗ ತನುಮನಧನ ಸಹಾಯವಿದೆ ಎಂದು ಹೇಳುತ್ತಿದ್ದೀರಿ. ಒಟ್ಟಾರೆಯಾಗಿ ನಿಮ್ಮ‌ಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು ” ತನು- ಮನ-ಧನ” – ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...