ಬೆಂಗಳೂರು: ಇಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ನಾಯಕರು ದೊಡ್ಡ ಮಟ್ಟದಲ್ಲಿ ಸಮಾವೇಶ ಹಮ್ಮಿಕೊಂಡಿದ್ದಾರೆ. ಮುಂದಿನ ಚುನಾವಣೆಗೆ ತಮ್ಮ ಸರ್ಕಾರ ಏನೆಲ್ಲಾ ಸಾಧನೆ ಮಾಡಿದೆ ಎಂಬುದನ್ನು ತೋರಿಸಲು ಇಂದು ಈ ಕಾರ್ಯಕ್ರಮ ಮಾಡುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೋ ಕಮೆಂಟ್ ಎಂದಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮೂರು ವರ್ಷ ಜನರಿಗೆ ಸ್ಪಂದಿಸಿಲ್ಲ ಅಂತ ಈಗ ಸಮಾವೇಶ ಮಾಡಲು ಹೊರಟಿದ್ದಾರೆ. ಈಗ ಜನಸ್ಪಂದನಾ ಸಮಾವೇಶ ಮಾಡಿ ತೋರಿಸುತ್ತಿದ್ದಾರೆ. ನಾವೂ ನಿಮ್ಮ ಜೊತೆಗಿದ್ದೇವೆಂದು ತೋರಿಸಲು ಸಮಾವೇಶ ಮಾಡುತ್ತಿದ್ದಾರೆ. ಈ ಬಗ್ಗೆ ನಾನು ಹೆಚ್ಚು ಕಮೆಂಟ್ ಮಾಡುವುದಿಲ್ಲ ಎಂದಿದ್ದಾರೆ.


