ನವದೆಹಲಿ : 2011ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿ, ಇಂದು ಬೆಳಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಹಲವು ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
2011ರಲ್ಲಿ 250 ಚೀನಾ ನಾಗರಿಕರಿಗೆ ವೀಸಾ ನೀಡಿದ ವಿಚಾರದಲ್ಲಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಎಫ್ಐಆರ್ ದಾಖಲಿಸಿ, ಇಂದು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಪುತ್ರ ಕಾರ್ತೀ ಚಿದಂಬರಂ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ದಾಳಿ ಬಗ್ಗೆ ಟ್ವೀಟ್ ಮಾಡಿರುವ ಚಿದಂಬರಂ, ಚೆನ್ನೈ ಮತ್ತು ಡೆಲ್ಲಿ ಸಿಬಿಐ ಟೀಂ ನನ್ನ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ದಾಳಿ ಮಾಡುವುದಕ್ಕೂ ಮುನ್ನ ಸಿಬಿಐ ಅಧಿಕಾರಿಗಳು ನನಗೆ ಎಫ್ಐಆರ್ ಪ್ರತಿ ನೀಡಿದರು. ಆದರೆ ಆ ಎಫ್ಐಆರ್ ಕಾಪಿ ನೋಡಿದರೆ ಅಲ್ಲಿ ಆರೋಪಿ ಸ್ಥಾನದಲ್ಲಿ ನನ್ನ ಹೆಸರೇ ಇರಲಿಲ್ಲ. ಜೊತೆಗೆ ಶೋಧ ನಡೆಸಿದ ತಂಡಕ್ಕೆ ಏನು ಕೂಡ ಸಿಕ್ಕಿಲ್ಲ. ಆದರೆ ಶೋಧ ಕಾರ್ಯ ಮಾತ್ರ ಸಖತ್ ಇಂಟ್ರೆಸ್ಟಿಂಗ್ ಆಗಿ ಇತ್ತು ಎಂದು ಟ್ವೀಟ್ ಮಾಡಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…