ಬೆಂಗಳೂರು: ರಾಜ್ಯದಲ್ಲಿ ಆಗಾಗ ಭ್ರಷ್ಟಾಚಾರದ ವಾಸನೆ ಮೂಗಿಗೆ ಬಡಿಯುತ್ತಲೇ ಇರುತ್ತದೆ. ಇದೀಗ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪವೊಂದು ಕೇಳಿ ಬಂದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಬ್ರಹ್ಮಾಂಡ ಭ್ರಷ್ಟಾಚಾರವೊಂದು ಹೆಚ್ಚು ಸುದ್ದಿಯಾಗುತ್ತಿದೆ. ನಕಲಿ ಬಿಲ್ ಮಾಡಿ ಕೋಟಿ ಕೋಟಿ ಹಣ ಪಡೆದಿದ್ದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ನಕಲಿ ಬಿಲ್ ಸೃಷ್ಟಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ದೂರು ನೀಡಿದ್ದರು. ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದಾರೆ. ಲೋಕಾಯುಕ್ತ ತನಿಖೆಯಲ್ಲಿ 118 ಕೋಟಿ ಗುಳುಂ ಮಾಡಿರುವುದು ಬೆಳಕಿಗೆ ಬಂದಿದೆ. ಭ್ರಷ್ಟಾಚಾರ ಬಯಲಾಗುತ್ತಿದ್ದಂತೆ ಬೆಂಗಳೂರು ಪಾಲಿಕೆಯ 10ಕ್ಕೂ ಹೆಚ್ಚು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ನಗರಾಭಿವೃದ್ಧಿಇಲಾಖೆಯ ಅಧೀನ ಕಾರ್ಯದರ್ಶಿ ಎಂಟು ಎಂಜಿನಿಯರ್ ಗಳನ್ನು ಅಮಾನತು ಮಾಡಿ, ಆದೇಶ ಹೊರಡಿಸಲಾಗಿದೆ. 2019-20ರಲ್ಲಿ KRIDL ನಿಂದ ಕಾಮಗಾರಿಗಳು ಹಂಚಿಕೆಯಾಗಿತ್ತು. ಆದರೆ ಕಾಮಗಾರಿ ಮಾಡದೆ ಸುನಾರು 250 ಕೋಟಿ ಬಿಲ್ ಮಂಜೂರಾಗಿದೆ. ಈ ಕಾಮಗಾರಿಗಳಿಗೆಲ್ಲಾ ನಕಲಿ ಬಿಲ್ ಬರೆದಿರುವುದರ ಬಗ್ಗೆ ಸಂಸದ ಡಿಕೆ ಸುರೇಶ್ ದೂರು ನೀಡಿದ್ದರು.