Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಸದಸ್ಯತ್ವ ನೋಂದಣಿಗೆ ಸೂಚನೆ

Facebook
Twitter
Telegram
WhatsApp

 

ಚಿತ್ರದುರ್ಗ.(ಡಿ.09): 2022-23ನೇ ಸಾಲಿಗೆ ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆಯು ಅನುಷ್ಠಾನಗೊಂಡಿದ್ದು, ಈ ಯೋಜನೆಯಡಿ ಸದಸ್ಯರನ್ನು ನೋಂದಾಯಿಸುವ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಪ್ರಯುಕ್ತ ಗ್ರಾಮೀಣ ಪ್ರದೇಶದ ಹಾಗೂ ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಯಶಸ್ವಿನಿ ಯೋಜನೆಯಡಿ ನಿಗಧಿತ ವಂತಿಗೆಯನ್ನು ಪಾವತಿಸಿ ನೋಂದಾಯಿಸಿಕೊಳ್ಳಬೇಕಾಗಿರುತ್ತದೆ.

ಸರ್ಕಾರವು ಗ್ರಾಮೀಣ ಯಶಸ್ವಿನಿ ಯೋಜನೆಯಡಿ ನೋಂದಾಯಿಸಿಕೊಳ್ಳುವ ಸದಸ್ಯರ ವಂತಿಗೆ ರೂ.500-00ಗಳ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸದಸ್ಯರುಗಳ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ.

ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರಿಗೆ ಯೋಜನೆಯಡಿ ನೋಂದಾಯಿಸಿಕೊಳ್ಳುವ ಸದಸ್ಯರು ರೂ.1000 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸದಸ್ಯರುಗಳ ವಂತಿಗೆಯನ್ನು ಸರ್ಕಾರವೇ ಭರಿಸಲಿದ್ದು, ಯಶಸ್ವಿನಿ ಯೋಜನೆಯಲ್ಲಿ ಸದಸ್ಯರನ್ನು ನೊಂದಾಯಿಸುವ ಪ್ರಕ್ರಿಯೆಯು ಇದೇ ಡಿಸೆಂಬರ್ 31ಕ್ಕೆ ಮುಕ್ತಾಯವಾಗುವುದು.
ಪ್ರಯುಕ್ತ ಎಲ್ಲಾ ಗ್ರಾಮಾಂತರ ರೈತ ಸಹಕಾರಿ ಸದಸ್ಯರು ಹಾಗೂ ನಗರ ಸಹಕಾರಿ ಸದಸ್ಯರುಗಳ ಮೇಲ್ಕಂಡ ಅವಕಾಶವನ್ನು ಉಪಯೋಗಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!