ಬೆಂಗಳೂರು: ಸರ್ಕಾರಿ ಹುದ್ದೆಗಳು ಅದ್ಯಾವಾಗ ಕಾಲ್ ಆಗುತ್ತೆ ಅಂತ ಸಾಕಷ್ಟು ನಿರೀಕ್ಷೆಯಿಂದ ಆಕಾಂಕ್ಷಿಗಳು ಕಾಯುತ್ತ ಇದ್ದಾರೆ. ಆಕಾಂಕ್ಷಿಗಳಿಗೆಲ್ಲಾ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಆದಷ್ಟು ಬೇಗ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ತುಂಬುವ ಬಗ್ಗೆ ಮಾತನಾಡಿದ್ದಾರೆ.
2.50 ಲಕ್ಷ ಖಾಲಿ ಹುದ್ದೆಗಳನ್ನು ಒಂದೇ ಸಲಕ್ಕೆ ಭರ್ತಿ ಮಾಡಲಾಗುವುದಿಲ್ಲ. ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಐದು ಗ್ಯಾರೆಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59,000 ಕೋಟಿ ರೂ. ಬೇಕಿದೆ. ಈ ಹಣವನ್ನು ಖರ್ಚು ಮಾಡಲು ನಾವು ಸಿದ್ಧರಿದ್ದು ನಮ್ಮ ಐದೂ ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ.
2022-23 ನೇ ಸಾಲಿನಲ್ಲಿ ಯುವ ನಿಧಿ ಕಾರ್ಯಕ್ರಮದಡಿ ನಿರುದ್ಯೋಗಿ ಪದವೀಧರರು, ಡಿಪ್ಲೊಮಾ ಮಾಡಿದವರಿಗೆ 6 ತಿಂಗಳೊಳಗೆ ಕೆಲಸ ದೊರೆಯದೇ ಹೋದರೆ, ಪದವೀಧರರಿಗೆ 3 ಸಾವಿರ ಹಾಗೂ ಡಿಪ್ಲೊಮಾ ಮಾಡಿದವರಿಗೆ 1500 ರೂ.ಗಳನ್ನು 24 ತಿಂಗಳು ನೀಡಲಾಗುವುದು ಎಂದಿದ್ದಾರೆ.