Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನವೆಂಬರ್ ಡೆಡ್ಲೈನ್ : ಹಣ ಪಾವತಿಸದೆ ಹೋದರೆ ರಣದೀಪ್ ಸುರ್ಜೆವಾಲಗೆ ಗುತ್ತಿಗೆದಾರರಿಂದ ದೂರು..!

---Advertisement---

ಬೆಂಗಳೂರ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಗುತ್ತಿಗೆದಾರರು ಮತ್ತೆ ಎಚ್ಚರಿಕೆಯ ಗಂಟೆ ಹೊಡೆದಿದ್ದಾರೆ. ಬಾಕಿ ಉಳಿಸಿಕೊಂಡಿರುವ 33 ಸಾವಿರ ಕೋಟಿ ಹಣವನ್ನು ನವೆಂಬರ್ ಒಳಗೆ ನೀಡಬೇಕು, ಇಲ್ಲವಾದರೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹಾಗೂ ರಾಜ್ಯಪಾಲರಿಗೂ ದೂರು ನೀಡುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ರಾಜ್ಯ ಗುತ್ತಿಗೆದಾರ ಸಂಘದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ನಮಗೆ ರಾಜ್ಯ ಸರ್ಕಾರದಿಂದ 33 ಸಾವಿರ ಕೋಟಿ ರೂಪಾಯಿ ಬಾಕಿ ಇದೆ. ಐದಾರು ಬಾರಿ ಸಿಎಂ ಸೇರಿದಂತೆ ಹಲವು ಸಚಿವರನ್ನು ಭೇಟಿ ಮಾಡಿದ್ದೇವೆ. ಸರ್ಕಾರದ ಎಂಟು ಇಲಾಖೆಯಿಂದ ಒಟ್ಟು 33 ಸಾವಿರ ಕೋಟಿ ಬಾಕಿ ಇದೆ. PWD ಇಲಾಖೆಯಿಂದ ಅಲ್ಪಸ್ವಲ್ಪ ಬಿಡುಗಡೆ ಆಗ್ತಿದೆ. ಅದಾಗಿಯೂ 9 ಸಾವಿರ ಕೋಟಿ ಹಣ ಬಾಕಿ ಇದೆ. ನಮ್ಮ ಸಿಬ್ಬಂದಿಗಳಿಗೆ ದಸರಾ, ದೀಪಾವಳಿ ಉಡುಗೊರೆ ಕೊಡುವುದಕ್ಕೂ ಆಗದ ಪರಿಸ್ಥಿತಿಯಲ್ಲಿದ್ದೇವೆ. ದಸರಾ ಹಬ್ಬದ ಸಮಯದಲ್ಲಿ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಓಡಾಡಿದ್ದೇವೆ. ಈಗ ದೀಪಾವಳಿ ಹಬ್ಬ ಬಂದಾಗಲೂ ನಮ್ಮ ಸಿಬ್ಬಂದಿಗಳ ಕಣ್ಣು ತಪ್ಪಿಸಿ ಓಡಾಡಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

ನಮ್ಮ ಸಹನೆಯ ಕಟ್ಟೆ ಒಡೆಯುವಂತೆ ರಾಹ್ಯ ಸರ್ಕಾರ ಮಾಡಬಾರದು. ಡಿಸೆಂಬರ್ ತನಕ ರಾಜ್ಯ ಸರ್ಕಾರಕ್ಕೆ ಗುತ್ತಿಗೆದಾರರ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಲು ಡೆಡ್ಲೈನ್ ನೀಡಲಾಗಿದೆ. ನವೆಂಬರ್ ಒಳಗೆ ಎಲ್ಲಾ ಬಿಲ್ ಬಾಕಿ ಹಣ ಬಿಡುಗಡೆಯಾಗಿ ಪಾವತಿಯಾಗಬೇಕು. ಬಾಕಿ ಹಣ ಬಿಡುಗಡೆ ಮಾಡದಿದ್ರೆ ರಾಜ್ಯಪಾಲರಿಗೆ ದೂರು ನೀಡುತ್ತೇವೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾಗೂ ದೂರು ನೀಡಲು ತೀರ್ಮಾನ ಮಾಡಿದ್ದೇವೆ ಎಂದು ಗುತ್ತಿಗೆದಾರರ ಸಂಘ ಎಚ್ಚರಿಕೆಯನ್ನ ನೀಡಿದೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...