Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನವೆಂಬರ್ ಬಂದೇ ಬಿಡ್ತು : ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಅಹಿಂದ ನಾಯಕರು

---Advertisement---

 

 

 

ಬೆಂಗಳೂರು: ಸದ್ಯ ಕಾಂಗ್ರೆಸ್ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿಯದ್ದೆ ದೊಡ್ಡ ಸದ್ದಾಗುತ್ತಿದೆ. ಸೆಪ್ಟೆಂಬರ್ ಕ್ರಾಂತಿ ಅಂತು ಏನೇನು ಆಗಲಿಲ್ಲ. ಆದರೆ ನವೆಂಬರ್ ಕ್ರಾಂತಿ ಆಗುವ ಎಲ್ಲಾ ಸೂಚನೆಗಳು ಕಾಣಿಸುತ್ತಿವೆ. ಇದರ ನಡುವೆ ಸಚಿವ ಸಂಪುಟ ಪುನರ್ ರಚನೆಯನ್ನು ಮಾಡಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಬೆಳವಣಿಗೆ ನಡೆದಿದ್ದು, ಅಹಿಂದ ನಾಯಕರು ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದಾರೆ.

ನವೆಂಬರ್ ಕ್ರಾಂತಿ ಚರ್ಚೆಯಿಂದ ಹಲವರು ಅಂತರ ಕಾಯ್ದುಕೊಂಡಿದ್ದಾರೆ. ಅಲ್ಪಸಂಖ್ಯಾತ, ಹಿಂದುಳಿದ ದಲಿತ ಸಮುದಾಯಕ್ಕೆ ಸೇರಿದ ನಾಯಕರು ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದರೆ, ಇನ್ನೊಂದಷ್ಟು ಸಚಿವರು ಯಾರ ಸಹವಾಸವೂ ನಮಗೆ ಬೇಡ, ನಾಯಕತ್ವ ಬದಲಾವಣೆ ವಿಚಾರವೂ ನಮಗೆ ಬೇಡ ಎಂಬಂತೆ ದೂರ ನಿಂತಿದ್ದಾರೆ. ನಮಗೆ ನಮ್ಮ ನಮ್ಮ ಸಚಿವ ಸ್ಥಾನ ಉಳಿದರೆ ಸಾಕು ಎಂಬಂತೆ ದೂರ ಸರಿದಿದ್ದಾರೆ. ತಮ್ಮ ತಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವ ಹರಸಾಹಸ ಮಾಡಿದ್ದಾರೆ ಎನ್ನಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಹೈಕಮಾಂಡ್ ನಾಯಕರಿಗೆ ಮನವಿ ಮಾಡಿಕೊಂಡಿದ್ದು, ಸಚಿವ ಸಂಪುಟ ಪುನರ್ ರಚನೆಯನ್ನು ಮುಂದೂಡಿವಂತೆ ಮನವಿ ಮಾಡಿಕೊಂಡಿದ್ದರು. ಒಂದು ವೇಳೆ ಸಚಿವ ಸಂಪುಟ ಪುನರ್ ರಚನೆಯಾದರೆ ಒಂದಷ್ಟು ರೀಶಫಲ್ ಆಗಿಯೇ ಆಗುತ್ತೆ. ಹೊಸಬರ ಆಯ್ಕೆಯಾಗುತ್ತೆ. ಈಗಾಗಲೇ ಹಲವರು ಸಚಿವ ಸ್ಥಾನ ತ್ಯಾಗದ ಬಗ್ಗೆ ಮಾತನಾಡಿದ್ದಾರೆ. ಆದರೆ ಉಳಿದವರು ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳಬೇಕೆಂಬ ಅಲರ್ಟ್ ಆಗಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಎಲ್ಲಿಯೂ ಮಾತನಾಡ್ತಿಲ್ಲ. ಹೀಗಾಗಿ ನವೆಂಬರ್ ಕ್ರಾಂತಿ ಏನಾಗಬಹುದು ಎಂಬ ಕುತೂಹಲವಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...