Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ಜೊತೆಗೆ ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ : ವಿಜಯೇಂದ್ರನ ಸ್ಥಾನಕ್ಕೆ ಕುತ್ತು..!

---Advertisement---

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ಜೋರಾಗಿದೆ. ಸಿಎಂ ಬದಲಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿರುವುದರ ನಡುವೆ ಡಿಕೆಶಿ ಸಿಎಂ ಆಗುವುದಕ್ಕೆ ಡೇಟ್ ಫಿಕ್ಸ್ ಆಗಿದೆ ಎಂಬ ಮಾತು ಕೇಳಿ ಬರುತ್ತಿದೆ. ಇದನ್ನ ಹೊರತುಪಡಿಸಿದರೂ ಸಚಿವ ಸಂಪುಟ ವಿಸ್ತರಣೆಯಾಗುವ ಎಲ್ಲಾ ಸಾಧ್ಯತೆಯೂ ಇದೆ. ಕಾಂಗ್ರೆಸ್ ಪಕ್ಷದಲ್ಲೇನೋ ನವೆಂಬರ್ ಕ್ರಾಂತಿಯ ಬಗ್ಗೆ ಕುತೂಹಲವಿದೆ. ಆದರೆ ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿಯಾಗಲಿದೆ ಎನ್ನಲಾಗ್ತಾ ಇದೆ.

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿಯಾದ್ರೆ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬಹುದು ಎನ್ನಲಾಗ್ತಿದೆ. ಯಾಕಂದ್ರೆ ಬಿಜೆಪಿಯಲ್ಲಿ ಮೂರು ಬಣಗಳಿರೋದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಒಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಬಣವಾದ್ರೆ, ಮತ್ತೊಂದು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಬಣ, ಮತ್ತೊಂದು ರೆಬೆಲ್ ನಾಯಕರ ಬಣವಾಗಿದೆ. ರೆಬೆಲ್ ನಾಯಕರ ಬಣದಲ್ಲಿದ್ದ ಯತ್ನಾಳ್ ಅವರು ಸದಾ ವಿಜಯೇಂದ್ರ ಹಾಗೂ ಅವರ ತಂದೆ ಯಡಿಯೂರಪ್ಪ ಅವರ ಮೆಡಲೆ ಆಕ್ರೋಶ ಹೊರ ಹಾಕುತ್ತಿದ್ದರು.

ಇದೀಗ ನವೆಂಬರ್ ಕ್ರಾಂತಿಯ ಹಿನ್ನೆಲೆ, ರೆಬೆಲ್ ನಾಯಕರು ಒಟ್ಟುಗೂಡಿ ಸಭೆ ಸೇರಿದ್ದಾರೆ. ಬಿಜೆಪಿ ಉಚ್ಚಾಟಿತ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಹಾಜರಾಗಿದ್ದು, ಜೊತೆಗೆ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಸೇರಿ ಬಸನಗೌಡ ಪಾಟೀಲ್ ಯತ್ನಾಳ್ ಜೊತೆ ಚರ್ಚೆ ನಡೆಸಿದ್ದಾರೆ. ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಅವರ ಸದಾಶಿವನಗರದ ನಿವಾಸದಲ್ಲಿ ನಡೆದ ಸಭೆಯಲ್ಲಿ ರೆಬೆಲ್ ತಂಡದ ಮುಂದಿನ ನಡೆ ಹಾಗೂ ವಿಜಯೇಂದ್ರ‌ ಬದಲಾವಣೆಗೆ ವರಿಷ್ಠರಿಗೆ ಮತ್ತೊಮ್ಮೆ ಏನೆಲ್ಲ ಹೇಳಬೇಕೆಂದು ಚರ್ಚೆ ನಡೆಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now