ಬೆಂಗಳೂರು: ಗಾಣಿಗ ಅಭಿವೃದ್ಧಿ ನಿಗಮ ಹಾಗೂ ನಾರಾಯಣ ಗುರುಗಳ ಅಭಿವೃದ್ಧಿ ನಿಗಮ ಸ್ಥಾಪನೆ ಬಿಲ್ಲವ/ಈಡಿಗ ಸಮುದಾಯದ ಬಹು ದಿನದ ಕನಸಾಗಿತ್ತು. ಈ ಬೇಡಿಕೆಯನ್ನು ಹಲವು ಬಾರಿ ಸರ್ಕಾರದ ಮುಂದೆಯೂ ಇಟ್ಟಿದ್ದರು. ಇದೀಗ ರಾಜ್ಯ ಸರ್ಕಾರ ಅದಕ್ಕೆ ಅಸ್ತು ಎಂದಿದೆ. ಅಭಿವೃದ್ಧಿಗಾಗಿ ಹೊಸ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
“ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ” ಎಂದು ಸಿಎಂ ಬೊಮ್ಮಾಯಿ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.