Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

NPS ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು OPS ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ: ಸಿ.ಎಂ. ಸಿದ್ದರಾಮಯ್ಯ

---Advertisement---

ಬೆಂಗಳೂರು. ಜೂ 18: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿದರು.

ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. NPS ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು OPS ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.

1964 ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಮಹತ್ತರ ವರ್ಷಗಳ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ. ಇದಕ್ಕೆ ನೀವೆಲ್ಲರೂ ಅಭಿನಂದನಾರ್ಹರು ಎಂದು ಶ್ಲಾಘಿಸಿದರು.

ಇಡೀ ಏಷ್ಯಾದಲ್ಲಿ ಮೊದಲಿಗೆ ವಿದ್ಯುತ್ ಉತ್ಪಾದನೆ ಆಗಿದ್ದು 1902 ರಲ್ಲಿ ಕರ್ನಾಟಕದಲ್ಲಿ. 1905 ರಲ್ಲಿ ಬೆಂಗಳೂರಿನಲ್ಲಿ ಪ್ರಥಮ ವಿದ್ಯುತ್ ಸರಬರಾಜು ಕಂಪನಿ ಆರಂಭಿಸಲಾಯಿತು. 1908 ರಲ್ಲಿ ಮೊದಲ ಬಾರಿ ಅರಮನೆಗೆ ವಿದ್ಯುತ್ ಬಂತು. ಅಲ್ಲಿಂದ ಇಲ್ಲೀವರೆಗೆ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ನಾವು 34000 ಮೆಘಾ ವ್ಯಾಟ್ ಉತ್ಪಾದನೆ ಮಾಡುತ್ತಿರುವ ರಾಜ್ಯ ಎನ್ನುವ ಹೆಗ್ಗಳಿಕೆ ಕೇವಲ ನಮ್ಮ ರಾಜ್ಯದ್ದಾಗಿದೆ ಎಂದರು.

ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗುತ್ತಿರುವುದು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿರುವ ಕಾರಣಕ್ಕೇ ಎಂದು ವಿಶ್ಲೇಷಿಸಿದರು.

ರೈತರಿಗೆ, ಕೃಷಿಗೆ, ಪಂಪ್ ಸೆಟ್ ಗಳಿಗೆ ಹಗಲಲ್ಲೂ 7 ಗಂಟೆ ಅಗತ್ಯ ವಿದ್ಯುತ್ ಸರಬರಾಜು ಮಾಡಲು ಶಕ್ತರಾಗುತ್ತೇವೆ. ಈ ಗುರಿ ಇಟ್ಟುಕೊಂಡು ಕೆಲಸಗಳು ನಡೆಯುತ್ತಿವೆ. 60000 ಮೆಘಾ ವ್ಯಾಟ್ ಉತ್ಪಾದನೆ ಗುರಿ ನಾವು ತಲುಪಿದ ತಕ್ಷಣ ಇದು ಸಾಧ್ಯವಗಲಿದೆ. ವಿದ್ಯುತ್ ಪ್ರಮುಖ ಕಚ್ಛಾವಸ್ತು ಎನ್ನುವುದನ್ನು ನಾವು ಮರೆಯಬಾರದು ಎಂದರು.

ನೌಕರರು ಮತ್ತು ಕಾರ್ಮಿಕರು ಬಹಳ ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತಿದ್ದೀರಿ. ನಿಮ್ಮ ಎಲ್ಲಾ ಬೇಡಿಕೆಗಳನ್ನೂ ಈಡೇರಿಸಲು ನಮ್ಮ ಸರ್ಕಾರ ಸಿದ್ಧವಿದೆ. ನಾವು ನಿಮ್ಮ ಜೊತೆಗೆ ಇದ್ದೇವೆ. ನೀವು ನಮ್ಮ ಜೊತೆಗೆ ಇರಿ ಎಂದು ಕರೆ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment