Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾಲಿಕೆಯಲ್ಲಿ ಅವ್ಯವಹಾರ ಆರೋಪ, ಕ್ರಮಕ್ಕೆ ಒತ್ತಾಯ : ಎನ್, ಆರ್ ರಮೇಶ್

Facebook
Twitter
Telegram
WhatsApp

ಬೆಂಗಳೂರು: ಬೆಂಗಳೂರು ಮಹಾ ನಗರ ಪಾಲಿಕೆಯಲ್ಲಿ ಅವ್ಯವಹಾರ ನಡೆಯುತ್ತಿದೆಯೆಂದು ಆರೋಪಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಅಧ್ಯಕ್ಷ ಎನ್‌.ಆರ್. ರಮೇಶ್ ದೂರು ನೀಡಿದ್ದಾರೆ.

ಕಾಮಗಾರಿಗಳ ನಿರ್ವಹಣೆ ಮಾಡದೆಯೇ 62.86 ಕೋಟಿ ರೂಪಾಯಿಗಳಷ್ಟು ಬೃಹತ್ ಮೊತ್ತವನ್ನು ಗುತ್ತಿಗೆದಾರರಿಗೆ ಪಾವತಿಸಲಾಗಿದೆ ಎಂದು ಆರೋಪಿಸಿದ್ದು, ಅಕ್ರಮ ನಡೆಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳನ್ನು ಅವರು ಆಗ್ರಹಿಸಿದ್ದಾರೆ.

ಬೆಂಗಳೂರು ಮಹಾನಗರದ ವ್ಯಾಪ್ತಿಯಲ್ಲಿರುವ ಚಲ್ಲಘಟ್ಟ, ವೃಷಭಾವತಿ, ಕೋರಮಂಗಲ ಮತ್ತು ಹೆಬ್ಬಾಳ ಸಂಬಂಧಿಸಿದ ರಾಜಕಾಲುವೆಗಳ ಅಭಿವೃದ್ಧಿ ಕಾಮಗಾರಿಗಳನ್ನು JNURM ಅಡಿಯಲ್ಲಿ ಒಟ್ಟು 496.90 ಕೋಟಿ ಮೊತ್ತದ ಅನುದಾನದಲ್ಲಿ 15 ಪ್ಯಾಕೇಜ್‌ಗಳ ಮೂಲಕ 2005-2006ರಲ್ಲಿ ಕೈಗೊಳ್ಳಲಾಗಿತ್ತು.

ರಾಜಕಾಲುವೆಗಳ ಮರು ನಿರ್ಮಾಣ, ಪ್ರವಾಹ ನಿರ್ವಹಣೆ ಮತ್ತು ಕೊಳಚೆ ನೀರು ಮಾರ್ಗ ಬದಲಾವಣೆ ಎಂಬ ಹೆಸರಿನಲ್ಲಿ ಈ 15 ಪ್ಯಾಕೇಜ್ಗಳ ಕಾಮಗಾರಿ ಕೈಗೊಳ್ಳಲಾಗಿತ್ತು.

ಈ 15 ಪ್ಯಾಕೇಜ್ಗಳ ಒಟ್ಟು 496.90 ಕೋಟಿ ಮೊತ್ತದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರು ಬೆಂಗಳೂರು ನಗರ ಪ್ರದೇಶದಲ್ಲಿ ಮಳೆ ನೀರು ನಿರ್ವಹಣೆಯ ಮೇಲಿನ ಕಾರ್ಯ ನಿರ್ವಹಣಾ ಲೆಕ್ಕ ಪರಿಶೋಧನೆ ವರದಿಯನ್ನು 2021ರಲ್ಲಿ ಸಲ್ಲಿಸಿದ್ದಾರೆ.

ಆದ್ರೆ ರಾಜಕಾಲುವೆ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಅನೇಕ ವಂಚನೆಗಳು ನಡೆದಿವೆ ಎಂದು ಎನ್‌‌.ಆರ್.ರಮೇಶ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

error: Content is protected !!