ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 29 : ದಾವಣಗೆರೆ ವಿಶ್ವವಿದ್ಯಾನಿಲಯ ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ, ಮಹಾರಾಜ ಮದಕರಿನಾಯಕ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜು ವತಿಯಿಂದ ಸಿದ್ದಾಪುರದಲ್ಲಿ ಏಳು ದಿನಗಳ ಕಾಲ ನಡೆದ ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ವಿಶೇಷ ಶಿಬಿರದಲ್ಲಿ ವಿದ್ಯಾರ್ಥಿಗಳು ರಾಷ್ಟ್ರೀಯ ಭಾವೈಕ್ಯತಾ ದೀಪ ಬೆಳಗುವ ಮೂಲಕ ಭಾರತ ಮಾತೆಗೆ ನಮಿಸಿ ಇಡಿ ಗ್ರಾಮಸ್ಥರ ಕಣ್ಮನ ಸೆಳೆದರು.
ನಿವೃತ್ತ ಪ್ರಾಚಾರ್ಯರಾದ ಪರಶುರಾಮ್ ಕಾಟವ್‍ಕರ್ ಮಾತನಾಡಿ ಎನ್.ಎಸ್.ಎಸ್. ಶಿಬಿರದಿಂದ ವಿದ್ಯಾರ್ಥಿಗಳು ಶಿಸ್ತು, ಸಮಯ ಪ್ರಜ್ಞೆ, ಸೇವಾ ಮನೋಭಾವ ಮೈಗೂಡಿಸಿಕೊಳ್ಳುವುದರ ಜೊತೆಗೆ ದೇಶ ಭಕ್ತಿ ಮೂಡಲಿದೆ ಎಂದು ಹೇಳಿದರು.
ಸಹ ಪ್ರಾಧ್ಯಾಪಕರು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕ-ರ ಶಿಬಿರಾಧಿಕಾರಿ ಪ್ರೊ.ಗಂಗಮ್ಮ ಎನ್.ಟಿ. ಸಹಾಯಕ ಪ್ರಾಧ್ಯಾಪಕ ಪ್ರೊ.ಶ್ರೀನಿವಾಸ ಎನ್.
ಶಿಬಿರದ ನಿರ್ದೇಶಕರು, ಪ್ರಾಂಶುಪಾಲರಾದ ಡಿ.ಆರ್.ರಂಗಸ್ವಾಮಿ, ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರುಗಳು ರಾಷ್ಟ್ರೀಯ ಭಾವೈಕ್ಯತಾ ದೀಪೋತ್ಸವದಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















