Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎನ್‍ಎಸ್‍ಎಸ್ ಶಿಬಿರ: ವಿದ್ಯಾರ್ಥಿಗಳ ಸೇವಾ ಮನೋಭಾವಕ್ಕೆ ಮೆಚ್ಚುಗೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್ ಚಿತ್ರದುರ್ಗ ಏ. 14
ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಮದಕರಿನಾಯಕ ವಿದ್ಯಾ ಸಂಸ್ಥೆ ಆಶ್ರಯದಲ್ಲಿ ಶ್ರೀಮತಿ ಯಶೋದರಮ್ಮ ಮಹಿಳಾ ಪ್ರಥಮ ದರ್ಜೆ ಕಾಲೇಜು, ಹಾಗೂ ಶ್ರೀ ಕೋಟೆ ಸಣ್ಣ ಬೋರಪ್ಪಬೋರಮ್ಮ ಪ್ರಥಮ ದರ್ಜೆ ಕಾಲೇಜಿನಿಂದ ಸಂಯುಕ್ತವಾಗಿ ಜೆ.ಎನ್.ಕೋಟೆಯಲ್ಲಿ ಆಯೋಜಿಸಿದ್ದ ಎನ್‍ಎಸ್‍ಎಸ್ ವಿಶೇಷ ಶಿಬಿರ ಮಂಗಳವಾರ ಯಶಸ್ವಿಯಾಗಿ ಮುಕ್ತಾಯವಾಯಿತು.

ಶಿಬಿರದ 6ನೇ ದಿನ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ದೀಪೋತ್ಸವ ಸಮಾರಂಭಕ್ಕೆ ಅಧ್ಯಕ್ಷತೆ ವಹಿಸಿದ್ದ ಎಸ್. ಸಂದೀಪ್, ಎನ್‍ಎಸ್‍ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ ಎಂದು ಹೇಳಿ ಗ್ರಾಮಸ್ಥರ ಸಮ್ಮುಖದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡ ಅವರು, ಯುವಜನರಲ್ಲಿ ಸಮಾಜಮುಖಿ ಚಿಂತನೆ ಬೆಳೆಸುವಲ್ಲಿ ಇಂತಹ ಶಿಬಿರಗಳ ಪಾತ್ರ ಅನನ್ಯ ಎಂದರು.

ಪ್ರಾಂಶುಪಾಲರಾದ ಡಾ. ಲತಾ ಎಸ್. ಮಾತನಾಡಿ, ಆರು ದಿನಗಳ ಅವಧಿಯಲ್ಲಿ ಸ್ವಚ್ಛತಾ ಕಾರ್ಯ, ಶ್ರಮದಾನ, ಆರೋಗ್ಯ ಜಾಗೃತಿ ಮತ್ತು ಪಶು ಸಂಗೋಪನೆ ಕುರಿತ ವಿಶೇಷ ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮಾಧಿಕಾರಿಗಳಾದ ಡಾ. ಧನಂಜಯ ಆರ್.ಜಿ.,  ಶ್ರೀನಿವಾಸ ದೊಡ್ಡಮನಿ ಅವರ ನೇತೃತ್ವದಲ್ಲಿ ಜೆ.ಎನ್. ಕೋಟೆ ಹಾಗೂ ನರೇನಹಾಳ ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯ ಮತ್ತು ಶ್ರಮದಾನ ನಡೆಸಲಾಯಿತು. ಊರಿನ ಪ್ರಮುಖ ಬೀದಿಗಳು, ದೇವಸ್ಥಾನಗಳ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಮೆರೆದರು. ಗ್ರಾಮಸ್ಥರು ಹಾಗೂ ಗ್ರಾಮದ ಮುಖಂಡರು ಸಹ ಉತ್ತಮ ಸಹಕಾರ ನೀಡಿದರು.

ನಿವೃತ್ತ ಪಿಎಸ್‍ಐ ತ್ಯಾಗರಾಜ್,ವಿದ್ಯಾರ್ಥಿಗಳಿಗೆ ಸಾಮಾಜಿಕ ಹೊಣೆಗಾರಿಕೆ ಮತ್ತು ಸಂವಿಧಾನ ಮೌಲ್ಯಗಳ ಕುರಿತು ಸಂದೇಶ ನೀಡಿದರು. ಆರು ದಿನಗಳ ಶಿಬಿರವು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ ಮತ್ತು ಗ್ರಾಮೀಣ ಸೇವೆಗೆ ಮಹತ್ವದ ವೇದಿಕೆಯಾಗಿದ್ದು, ಯಶಸ್ವಿಯಾಗಿ ಪೂರ್ಣಗೊಂಡಿತು. ಶಿಬಿರದ ಕೊನೆಯ ದಿನ ಧ್ವಜಾರೋಹಣದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now