Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ.13ರಂದು ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ

---Advertisement---

 

ಚಿತ್ರದುರ್ಗ,ಡಿ.10: ಚಿತ್ರದುರ್ಗ ನುಲೇನೂರು ಶಂಕರಪ್ಪ ಪ್ರತಿಷ್ಠಾನ ವತಿಯಿಂದ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಡಿಸೆಂಬರ್ 13ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಪ್ರವಾಸಿ ಮಂದಿರ ಪಕ್ಕದ ಲಿಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಮೇಲುಕೋಟೆ ಶಾಸಕ ದರ್ಶನ್  ಪುಟ್ಟಣ್ಣಯ್ಯ ಉದ್ಘಾಟನೆ ನೆರವೇರಿಸುವರು. ನೀರಾವರಿ ಹೋರಾಟ ಅನುಷ್ಠಾನ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ರೈತ ಸಂಘ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷ ಚಾಮರಸ ಪಾಟೀಲ್, ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ವಿನಾಯಕ ತೊಡರನಹಾಳ್, ನುಲೇನೂರು ಎಂ.ಶಂಕರಪ್ಪ ಪ್ರತಿಷ್ಠಾನ ಕಮಲಮ್ಮ ನುಲೇನೂರು ಶಂಕರಪ್ಪ, ಡಾ.ರವಿಶಂಕರ್ ನುಲೇನೂರು, ರೈತ ಸಂಘ ಕಾರ್ಯಾಧ್ಯಕ್ಷರಾದ ಜೆ.ಎಂ.ವೀರಸಂಗಯ್ಯ, ಎ.ಗೋವಿಂದರಾಜು, ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ, ಸರ್ವೋದಯ ಕರ್ನಾಟಕ ಮುಖಂಡ ಜೆ.ಯಾದವರೆಡ್ಡಿ, ಸಿಪಿಐ ರಾಜ್ಯ ಕಾರ್ಯದರ್ಶಿ ಜಿ.ಸಿ.ಸುರೇಶ್ ಬಾಬು, ಸಿಐಟಿಯು ರಾಜ್ಯ ಉಪಾಧ್ಯಕ್ಷ ಸೈಯದ್ ಮುಜೀಬ್, ರೈತ ಸಂಘ ರಾಜ್ಯ ಉಪಾಧ್ಯಕ್ಷರಾದ ಕೆ.ಪಿ.ಭೂತಯ್ಯ, ಮಂಜುಳ ಅಕ್ಕಿ, ವಲಯ ಕಾರ್ಯದರ್ಶಿ ಅರುಣ್ ಕುಮಾರ್ ಕುರುಡಿ, ವಿಭಾಗೀಯ ಕಾರ್ಯದರ್ಶಿ ಎಂ.ಎಲ್.ಕೆ.ನಾಯ್ಡು, ಮಹಿಳಾ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಸ್ತಿಹಳ್ಳಿ ಸುರೇಶ್ ಬಾಬು, ವಿಭಾಗೀಯ ಉಪಾಧ್ಯಕ್ಷ ಹೊರಕೇರಪ್ಪ, ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ ಭಾಗವಹಿಸುವರು.

ಮಹಿಳಾ ಹೋರಾಟಗಾರ್ತಿ ಕೋಲಾರ ಜಿಲ್ಲೆಯ ಎಸ್.ವರಲಕ್ಷ್ಮೀ ಅವರು ನುಲೇನೂರು ಶಂಕರಪ್ಪ “ಹಸಿರು ಪುರಸ್ಕಾರ” ಪ್ರಶಸ್ತಿಗೆ ಪುರಸ್ಕøತರಾಗಿದ್ದಾರೆ ಎಂದು ನುಲೇನೂರು ಶಂಕರಪ್ಪ ಪ್ರತಿಷ್ಠಾನ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...