ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಬಿಟ್ಟು ಬಿಡದಂತೆ ಸುರಿಯುತ್ತಿದೆ. ಕಳೆದೊಂದು ವಾರದಿಂದ ಅಂತು ಒಂದೇ ಸಮನೆ ಸುರಿಯುತ್ತಿದೆ. ಈ ಮಳೆಯಿಂದಾಗಿ ಸಾವನ್ನಪ್ಪಿರುವವರ ಸಂಖ್ಯೆ ಕಡಿಮೆ ಏನಲ್ಲ. ಮಳೆಯ ಅಬ್ಬರಕ್ಕೆ ಕರ್ನಾಟಕದಲ್ಲಿ ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತ ಕ್ರಮವಾಗಿ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಿದೆ. ವಿಜಯಪುರ, ಬಾಗಲಕೋಟೆ, ಚಿತ್ರದುರ್ಗದಲ್ಲಿ ಸಾಧಾರಣ ಮಳೆಯಾಗಿದೆ.

ಇನ್ನು ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ಭಾರೀ ಅನಾಹುತ ಉಂಟಾಗಿದೆ. ಸಾವು ನೋವುಗಳು ಸಂಭವಿಸಿವೆ. ರಾಜ್ಯದಲ್ಲಿ ಶನಿವಾರ ಸುರಿದ ಮಳೆಗೆ 27 ಮಂದಿ ಮೃತ ಪಟ್ಟಿದ್ದು, ಭಾನುವಾರ ಮತ್ತೆ 5 ಮಂದಿ ಸಾವನ್ನಪ್ಪಿದ್ದಾರೆ.

