ಸುದ್ದಿಒನ್ ವೆಬ್ ಡೆಸ್ಕ್
ರಾಯಪುರ : ಛತ್ತೀಸ್‌ಗಢದ ಆರೋಗ್ಯ ಕೇಂದ್ರದಲ್ಲಿ ನರ್ಸ್ ಒಬ್ಬರನ್ನು ಕಟ್ಟಿಹಾಕಿ, ನಾಲ್ವರು ಗ್ಯಾಂಗ್ ರೇಪ್ ಮಾಡಿದ್ದಾರೆ. ಅವರಲ್ಲಿ ಒಬ್ಬ ಅಪ್ರಾಪ್ತ ಎಂದು ಪೊಲೀಸರು ತಿಳಿಸಿದ್ದಾರೆ. 17 ವರ್ಷದ ಯುವಕ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ನಾಲ್ಕನೇ ಆರೋಪಿ ಪರಾರಿಯಾಗಿದ್ದಾನೆ. ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ನರ್ಸ್ ಆರೋಪಿಸಿದ್ದಾರೆ.
ಮಹೇಂದ್ರಗಢ ಜಿಲ್ಲೆಯ ಚಿಪ್ಚಿಪಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಕೆ ಒಂಟಿಯಾಗಿ ಕೆಲಸ ಮಾಡುತ್ತಿರುವುದನ್ನು ಗಮನಿಸಿದ ನಾಲ್ವರು ಆರೋಗ್ಯ ಕೇಂದ್ರಕ್ಕೆ ಪ್ರವೇಶಿಸಿದಾಗ ಇಡೀ ಪ್ರದೇಶ ನಿರ್ಜನವಾಗಿತ್ತು. ಈ ವೇಳೆ ಆಕೆಯ ಬಾಯಿ ಮುಚ್ಚಿ, ಕೈ ಮತ್ತು ಕಾಲುಗಳನ್ನು ಕಟ್ಟಿಹಾಕಿ, ಒಬ್ಬರ ನಂತರ ಒಬ್ಬರು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ. ಮತ್ತು ಅವರು ಇಡೀ ಘಟನೆಯನ್ನು ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಿದ್ದಾರೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ದೀಪೇಶ್ ಸೈನಿ ತಿಳಿಸಿದ್ದಾರೆ.
ಆರೋಗ್ಯ ಕೇಂದ್ರದಿಂದ 5 ಕಿ.ಮೀ ದೂರದಲ್ಲಿ ವಾಸವಾಗಿರುವ ನರ್ಸ್ ಮನೆಗೆ ತೆರಳಿ ಪೋಷಕರ ಬಳಿ ಹೇಳಿಕೊಂಡಿದ್ದಾಳೆ.
ತಕ್ಷಣ ಪೊಲೀಸರ ಮೊರೆ ಹೋದರು. ಉಪ ಆರೋಗ್ಯ ಕೇಂದ್ರದಲ್ಲಿ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಸುದ್ದಿ ಕೇಳಿ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ.
ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಭೂಪೇಶ್ ಭಾಗೇಲ್ ನೇತೃತ್ವದ ಛತ್ತೀಸ್‌ಗಢ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರು ಪ್ರತಿಭಟನೆ ನಡೆಸಿದರು.
ಆರೋಗ್ಯ ಕಾರ್ಯಕರ್ತರು ದೂರದ ಪ್ರದೇಶಗಳಲ್ಲಿ ಕೆಲಸ ಮಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಮತ್ತು ಅವರಿಗೆ ಭದ್ರತೆಯನ್ನು ಒದಗಿಸುವಂತೆ ಛತ್ತೀಸ್‌ಗಢ ಸರ್ಕಾರವನ್ನು ಒತ್ತಾಯಿಸಿದೆ.
ನಮಗೆ ರಕ್ಷಣೆ ಬೇಕು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ನಾವು ಕೆಲಸ ಮಾಡುವುದಿಲ್ಲ ಎಂದು ಜಿಲ್ಲೆಯ ಆರೋಗ್ಯ ಕೇಂದ್ರದ ಮುಖ್ಯ ಆರೋಗ್ಯಾಧಿಕಾರಿ ಪ್ರತಿಮಾ ಸಿಂಗ್ ಹೇಳಿದ್ದಾರೆ.