Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಡಿಕೆ ವ್ಯಾಪಾರಿ ಆತ್ಮಹತ್ಯೆ : ಸಾವಿಗೆ ಯಾರು ಕಾರಣ ?

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 14 : ತಾಲ್ಲೂಕಿನ ಸಿದ್ದಾಪುರ ಗ್ರಾಮದ ಸಮೀಪ  ಗೋದಾಮುವೊಂದರಲ್ಲಿ ಬುಧವಾರ ಸಂಜೆ ಅಡಕೆ ವ್ಯಾಪಾರಿ ಶೈಲೇಶ್ (46) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಡಿಕೆ ಉದ್ಯಮಿ ಉದಯಶೆಟ್ಟಿ ನನ್ನನ್ನು ನಿಂದಿಸಿದ್ದು, ಜೊತೆಗೆ ಹಣ ನೀಡಲು ಸತಾಯಿಸುತ್ತಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವೆ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದೆ.

ಶೈಲೇಶ್ ಬಳಿ 6 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅಡಿಕೆಯನ್ನು ಉದಯಶೆಟ್ಟಿ ಖರೀದಿಸಿದ್ದರು ಎನ್ನಲಾಗಿದೆ.

ಹಣ ಕೇಳಲು ಹೋದಾಗ ನಿಂದಿಸಿ ಕಳಿಸಿದ್ದ ಹಿನ್ನೆಲೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ನನ್ನ ಸಾವಿಗೆ ಉದಯಶೆಟ್ಟಿ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ ಎನ್ನಲಾಗಿದೆ.

ಅಪ್ಪ, ಹೆಂಡತಿ, ಪುತ್ರನಿಗೆ ಕ್ಷಮೆ ಕೇಳಿ ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment