Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾರ್ಗಸೂಚಿ ಪಾಲಿಸಿ, ಮಾಲಿನ್ಯ ರಹಿತವಾಗಿ ದೀಪಾವಳಿ ಆಚರಿಸಿ : ಡಿಸಿ ಕವಿತಾ ಎಸ್.ಮನ್ನಿಕೇರಿ

Facebook
Twitter
Telegram
WhatsApp

 

ಮಾಹಿತಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ (ಅಕ್ಟೋಬರ್19) : ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು, ಹಬ್ಬವನ್ನು ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿಪೂರ್ವಕವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮನವಿ ಮಾಡಿದ್ದಾರೆ.

ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಹಾಗೂ ವಾಯು ಮಾಲಿನ್ಯವನ್ನು ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುವುದರ ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತದೆ. ಪಟಾಕಿಗಳನ್ನು ಸಿಡಿಸುವಾಗ ಸರಿಯಾದ ಎಚ್ಚರಿಕೆ ವಹಿಸದಿದ್ದರೆ ವ್ಯಕ್ತಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ, ಸ್ಫೋಟದಿಂದ ಅಪಾಯ ಉಂಟಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ  ದೀಪಾವಳಿ ಹಬ್ಬವನ್ನು ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಆಚರಿಸುವಂತೆ ತಿಳಿಸಿದ್ದಾರೆ.

ಮಾರ್ಗಸೂಚಿ ಪಾಲಿಸಲು ಮನವಿ: ದೀಪಾವಳಿ ಹಬ್ಬ ಆಚರಿಸುವ ಸಂಬಂಧ ಹಾಗೂ ಸರ್ವೋಚ್ಛ ನ್ಯಾಯಾಲಯವು ಪಟಾಕಿ ಬಳಕೆ ಕುರಿತಂತೆ ನೀಡಿರುವ ಆದೇಶದ ಮೇರೆಗೆ ಜವಾಬ್ದಾರಿಯುತ ನಾಗರೀಕರು ಮಾರ್ಗಸೂಚಿ ಅನುಸರಿಸುವಂತೆ ಮನವಿ ಮಾಡಿದ್ದಾರೆ.

ಸರ್ವೋಚ್ಛ ನ್ಯಾಯಾಲಯವು ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸ್ಫೋಟಿಸಲು ಅವಕಾಶ ನೀಡಿದ್ದು, ಉಳಿದ ಸಮಯದಲ್ಲಿ ಪಟಾಕಿಗಳ ಸ್ಫೋಟವನ್ನು ಸಂಪೂರ್ಣವಾಗಿ ನಿμÉೀಧಿಸಿದೆ. ಸರ್ವೋಚ್ಛ ನ್ಯಾಯಾಲಯವು ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆ ನಿμÉೀಧಿಸಿರುತ್ತದೆ. “ಹಸಿರು ಪಟಾಕಿ” ಕುರಿತು ಸರ್ಕಾರದ ಆದೇಶ ಸಂಖ್ಯೆ: ಆರ್‍ಡಿ 465 ಟಿಎನ್‍ಆರ್ 2020ರ ನವೆಂಬರ್ 12 ರಲ್ಲಿ ವಿವರಣೆಯನ್ನು ನೀಡಲಾಗಿದೆ. ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧೀಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಗಳನ್ನು ಮಾರಾಟ ಮಾಡಬೇಕು. ಪರವಾನಗಿದಾರರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡಿರುವ ಪರವಾನಗಿಯಲ್ಲಿ ನಿಗಧಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು. ಬೇರೆ ಸ್ಥಳಗಳಲ್ಲಿ ಮತ್ತು ದಿನಾಂಕಗಳಲ್ಲಿ ಅಂಗಡಿಯನ್ನು ತೆರೆಯಬಾರದು. ಪ್ರತಿಯೊಂದು ಮಳಿಗೆಗಳಲ್ಲಿ ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡಿರುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಮತ್ತು ಪರವಾನಗಿ ಪತ್ರವನ್ನು ಪಡೆದಂತವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು. ಸಾರ್ವಜನಿಕರು ಸೂಕ್ಷ್ಮ ಪ್ರದೇಶಗಳಾದ ಶಾಲೆ ಮತ್ತು ಆಸ್ಪತ್ರೆಗಳ ಸಮೀಪದಲ್ಲಿ ಪಟಾಕಿಗಳನ್ನು ಸಿಡಿಸಬಾರದು. ಸಾರ್ವಜನಿಕರು 125 ಡೆಸಿಬಲ್ ಮಟ್ಟಕ್ಕಿಂತ ಹೆಚ್ಚು ಶಬ್ದ ಉಂಟು ಮಾಡುವ ಪಟಾಕಿಗಳನ್ನು ಖರೀದಿಸಬಾರದು ಹಾಗೂ ಸಿಡಿಸಬಾರದು.

ಪರಿಸರ ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಪರಿಸರ ಸ್ನೇಹಿ, ದೀಪಾವಳಿ ಆಚರಣೆಗಾಗಿ ಜಿಲ್ಲೆಯ ನಾಗರೀಕರ ಸಹಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸರ್ವೋಚ್ಛ ನ್ಯಾಯಾಲಯದ ಆದೇಶ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿದ್ದರಾಮಯ್ಯ ಸರ್ಕಾರಕ್ಕೆ ವರ್ಷದ ಸಂಭ್ರಮ : ಬಿಜೆಪಿಯ ಪ್ಲ್ಯಾನ್ ಏನು ಗೊತ್ತಾ..?

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ 135 ಕ್ಷೇತ್ರದಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿ, ಸ್ವತಂತ್ರವಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು. ಇದೀಗ ಆ ಸಂತಸದ ಗಳಿಗೆಗೆ ಭರ್ತಿ ಒಂದು ವರ್ಷವಾಗುತ್ತಿದೆ. ಮೇ20ಕ್ಕೆ ಸರ್ಕಾರ ರಚನೆ ಮಾಡಿ

ಬಿಜೆಪಿ – ಜೆಡಿಎಸ್ ಪಕ್ಷದಿಂದ 25 ರಿಂದ 30 ಜನ  ನಮ್ಮ ಪಕ್ಷಕ್ಕೆ ಬರುತ್ತಾರೆ : ಚಿತ್ರದುರ್ಗದಲ್ಲಿ ಸಚಿವ ಸುಧಾಕರ್ ಹೇಳಿಕೆ

ವರದಿ ಮತ್ತು ಫೋಟೋ ಕೃಪೆ,  ಸುರೇಶ್ ಪಟ್ಟಣ್,                         ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

error: Content is protected !!