Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಮೇಶ್ ಜಾರಕಿಹೊಳಿ ಮನೆ ಗೋಡೆ ಮೇಲೆ ಅಶ್ಲೀಲ ಪೋಸ್ಟರ್ : ಡಿಕೆಶಿ ಮೇಲೆ ಸಾಹುಕಾರ್ ಗರಂ..!

---Advertisement---

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ನಿವಾಸದ ಗೋಡೆಗಳಿಗೆ ರಾತ್ರೋ ರಾತ್ರಿ ಅಶ್ಲೀಲ ಚಿತ್ರಗಳನ್ನು ಅಂಟಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ಮನೆ ಮೇಲೆ ರಮೇಶ್ ಜಾರಕಿಹೊಳಿ ಅವರ ಪೋಸ್ಟರ್ ಗಳನ್ನು ಅಂಟಿಸಿದ್ದು, ಇದನ್ನ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲುಗರು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಮೊದಲಿನಿಂದಲೂ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಇದಕ್ಕೆ ಉತ್ತರ ಕೊಡುವುದಕ್ಕೆ ನಾನು ರಾಜಕೀಯವಾಗಿ ಸಿದ್ಧನಿದ್ದೇನೆ. ಈ ಘಟನೆ ಸಂಬಂಧ ಪೊಲೀಸರಿಗೆ ದೂರು ನೀಡಲು ನಿರ್ಧಾರ ಮಾಡಿದ್ದೇನೆ. ಜೊತೆಗೆ ಶೀಘ್ರದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿ, ಎಲ್ಲವನ್ನು ವಿವರಿಸಿ ಹೇಳುತ್ತೇನೆ ಎಂದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಅವರ ವರ್ತನೆ ಎಂತಹದ್ದು ಎಂಬುದರ ಬಗ್ಗೆ ಸುದ್ದಿಗೋಷ್ಠಿ ಕೂಡ ನಡೆಸುತ್ತೇನೆ ಎಂದಿರುವ ರಮೇಶ್ ಜಾರಕಿಹೊಳಿ ಅವರು, ಈ ವಿಚಾರವಾಗಿ ಕೇಂದ್ಎ ಗೃಹ ಸಚಿವರಿಗೂ ಮನವರಿಕೆ ಮಾಡಿಕೊಡುತ್ತೇವೆ ಎಂದಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಮನೆ ಗೋಡೆಗೆ ಪೋಸ್ಟರ್ ಗಳನ್ನು ಅಂಟಿಸಿರುವುದು ಸಿಸಿಟಿವಿಯಲ್ಲೂ ಸೆರೆಯಾಗಿದೆ. ಇಂದು ಆ ಸಂಬಂಧ ಸುದ್ದಿಗೋಷ್ಠಿ ನಡೆಸಿ, ರಮೇಶ್ ಜಾರಕಿಹೊಳಿ ವಿಚಾರ ತಿಳಿಸಲಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment