ಚಿತ್ರದುರ್ಗ. ಸೆ. 30 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿಂದು 2024ನೇ ಸಾಲಿನ ಶರಣ ಸಂಸ್ಕೃತಿ ಉತ್ಸವ ಹಾಗೂ ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150ನೇ ಜಯಂತ್ಯುತ್ಸವದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಶ್ರೀಮಠದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಜಯದೇವ ಜಗದ್ಗುರುಗಳು ಮಾಡದ ಕೆಲಸಗಳು ಇಲ್ಲ. ಜಯದೇವ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ಉನ್ನತ ಹುದ್ದೆಯಲ್ಲಿರುವವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಶ್ರೀಗಳ ಸತ್ಕಾರ್ಯಗಳನ್ನು ನಾಡಿಗೆ ತಿಳಿಸುವ ಕೆಲಸ ಮಾಡಲಾಗುವುದು. ಪೂಜ್ಯರು ಅನೇಕ ಸಂಘ ಸಂಸ್ಥೆಗಳಿಗೆ ದಾನ ಮಾಡಿರುತ್ತಾರೆ. ಅವರು ಸುತ್ತು ಕಟ್ಟು ಎಂಬ ಮಂತ್ರದಂತೆ ಕಾರ್ಯನಿರ್ವಹಿಸಿರುತ್ತಾರೆ. ಜಯದೇವ ಜಗದ್ಗುರುಗಳ ಕಾಲವನ್ನು ಸುವರ್ಣ ಯುಗವೆಂದು ಕರೆಯುತ್ತಾರೆ ಎಂದರು.
ಅಕ್ಟೋಬರ್ 5 ರಿಂದ 13 ರವರೆಗೆ ನಡೆಯುವ ವಿವಿಧ ಕಾರ್ಯಕ್ರಮಗಳ ಮಾಹಿತಿ ನೀಡಿದ ಶ್ರೀಗಳು, ಪ್ರತಿದಿನ ಬೆಳಗ್ಗೆ ಸಹಜಶಿವಯೋಗ ನಡೆಯಲಿದ್ದು, ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು, ಶ್ರೀ ಗುರುಮಹಾಂತ ಸ್ವಾಮಿಗಳು, ಡಾ. ಮರುಳಸಿದ್ದ ಸ್ವಾಮಿಗಳು ಶಿವಯೋಗ ಪ್ರಾತ್ಯಕ್ಷಿಕೆ ನಡೆಸಿಕೊಡುವರು. ಅಕ್ಟೋಬರ್ 5 ಜಯದೇವ ಕಪ್ ಕ್ರೀಡಾಕೂಟ ಅಂಗವಾಗಿ ಮೋಟಾರ್ ಬೈಕ್ ಜಾಥಾ ನಡೆಯಲಿದ್ದು, ನಗರಸಭೆ ಅಧ್ಯಕ್ಷೆ ಶ್ರೀಮತಿ ಸುಮಿತ ರಾಘವೇಂದ್ರ ಜಾಥಾವನ್ನು ಉದ್ಘಾಟಿಸುವರು.
ದಿ. 5.10.24ರಂದು ಬೆಳಗ್ಗೆ 10.00 ಗಂಟೆಗೆ ವಚನಕಮ್ಮಟ ಗೋಷ್ಠಿ – 1 ಅಷ್ಟಾವರಣ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಸಾಮೂಹಿಕ ವಿವಾಹ ನಡೆಯಲಿದ್ದು ಶ್ರೀ ಮಹಾಂತ ರುದ್ರೇಶ್ವರ ಸ್ವಾಮಿಗಳು ಸಮ್ಮುಖ ವಹಿಸುವರು. ಮಧ್ಯಾಹ್ನ 3.00 ಗಂಟೆಗೆ ನಡೆಯುವ ವಚನ ಕಮ್ಮಟ ಪರೀಕ್ಷೆ ರ್ಯಾಂಕ್ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭದಲ್ಲಿ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮಿಗಳು ಹಿರೇಮಾಗಡಿ ಇವರು ಸಮ್ಮುಖ ವಹಿಸುವರು. ಮಧ್ಯಾಹ್ನ 4.00 ಗಂಟೆಗೆ ಜಯದೇವ ಕಪ್ ಪಂದ್ಯಾವಳಿ ಅಂಗವಾಗಿ ಅಂಬೇಡ್ಕರ್ ವೃತ್ತದಲ್ಲಿ ಶ್ರೀ ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ ಪ್ರಾರಂಭವಾಗಲಿದ್ದು, ಸಂಸದ ಗೋವಿಂದ ಎಂ.ಕಾಳಜೋಳ ಅವರು ಪಥ ಸಂಚಲನವನ್ನು ಉದ್ಘಾಟಿಸುವರು. ಸಂಜೆ 6 ಗಂಟೆಗೆ ನಡೆಯುವ ಶ್ರೀ ಜಯದೇವ ಕಪ್ ಹೊನಲು ಬೆಳಕಿನ ಕ್ರೀಡಾಕೂಟವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಉದ್ಘಾಟಿಸುವರು.
ಕಾರ್ಯಕ್ರಮದಲ್ಲಿ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಗಳು ಮತ್ತು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಗಳು ಸಮ್ಮುಖ ವಹಿಸಲಿದ್ದು, ಸಂಸದ ಬಿ.ವೈ. ರಾಘವೇಂದ್ರ, ರಾಜ್ಯ ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಮೊದಲಾದವರು ಭಾಗವಹಿಸುವರು.
ದಿ. 6.10.24ರಂದು ಬೆಳಗ್ಗೆ 10 ಗಂಟೆಗೆ ವಚನಕಮ್ಮಟ ಗೋಷ್ಠಿ-2 ಪಂಚಾಚಾರ, ಮಹಿಳಾ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳು ನಡೆಯಲಿವೆ.
ದಿ. 7.10.24ರಂದು ಬೆಳಗ್ಗೆ 10.00 ಗಂಟೆಗೆ ವಚನಕಮ್ಮಟ ಗೋಷ್ಠಿ-3 ಷಟ್‍ಸ್ಥಲ ನಡೆಯಲಿದೆ. ಸಂಜೆ 6.00 ಗಂಟೆಗೆ ಜಯದೇವ ಕಪ್ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಹಳೆಯ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಯಲಿದ್ದು, ಶ್ರೀ ಶಿವಬಸವ ಗುರು ಮುರುಘರಾಜೇಂದ್ರ ಸ್ವಾಮಿಗಳು, ಅಥಣಿ ಇವರು ಸಮ್ಮುಖ ವಹಿಸುವರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಜೇತರಿಗೆ ಬಹುಮಾನ ವಿತರಣೆ ಮಾಡುವರು. ಮುಖ್ಯಅತಿಥಿಗಳಾಗಿ ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಮುರುಳಿಧರ ಹಾಲಪ್ಪ, ಬಳ್ಳಾರಿ ಹನುಮಂತಪ್ಪ, ಡಾ. ವೈ. ರಾಮಪ್ಪ, ಉಮೇಶ ಕಾರಜೋಳ, ಎನ್.ಲೋಕೇಶ್‍ಗೌಡ, ಬಿ. ಜನಾರ್ದನಸ್ವಾಮಿ, ಜಿ.ಎಸ್. ಅನಿತ್, ಮಹಾಲಿಂಗಪ್ಪ ಕುಂಚಿಗನಾಳ್, ಡಾ. ಸಿ.ವಿ.ಹರೀಶ್ ಪಾಲ್ಗೊಳ್ಳುವರು.
ದಿ. 8.10.24ರಂದು ಬೆಳಗ್ಗೆ 7.30 ಗಂಟೆಗೆ ಅನುಭವ ಮಂಟಪ ಮುಂಭಾಗ ಬೆಂಗಳೂರು ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಬಸವತತ್ತ್ವ ಧ್ವಜಾರೋಹಣ ನೆರವೇರಿಸುವರು. ಬೆಳಗ್ಗೆ 10 ಗಂಟೆಗೆ ಕೃಷಿ ಮತ್ತು ಕೈಗಾರಿಕೆ ವಸ್ತು ಪ್ರದರ್ಶನ ಏರ್ಪಾಡಾಗಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಸ್ತು ಪ್ರದರ್ಶನವನ್ನು ಉದ್ಘಾಟಿಸುವರು. ನಂತರ ನಡೆಯುವ ಕೃಷಿ ಮೇಳವನ್ನು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಉದ್ಘಾಟಿಸುವರು. ತುಮಕೂರು ಸಿದ್ಧಗಂಗಾಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಹೊಸದುರ್ಗ ಕುಂಚಿಟಿಗ ಸಂಸ್ಥಾನದ ಡಾ. ಶಾಂತವೀರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಮುಖ್ಯಅತಿಥಿಗಳಾಗಿ ಸಚಿವರುಗಳಾದ ಎಚ್.ಕೆ. ಪಾಟೀಲ್, ಎಸ್.ಎಸ್. ಮಲ್ಲಿಕಾರ್ಜುನ್, ಶರಣಬಸಪ್ಪ ದರ್ಶನಾಪೂರ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗವಹಿಸುವರು. ಸಂಜೆ 6 ಗಂಟೆಗೆ ಶ್ರೀ ಜಯದೇವ ಜಗದ್ಗುರುಗಳ 150ನೇ ಜಯಂತ್ಯುತ್ಸವದ ಸಾನ್ನಿಧ್ಯವನ್ನು ಶ್ರೀ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮಿಗಳು, ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸುವರು. ಮುಖ್ಯಅತಿಥಿಗಳಾಗಿ ಸಚಿವರುಗಳಾದ ಡಿ. ಸುಧಾಕರ್, ಈಶ್ವರ ಖಂಡ್ರೆ, ಶಾಸಕರಾದ ಕೆ.ಸಿ. ವೀರೇಂದ್ರ ಪಪ್ಪಿ, ಲಕ್ಷ್ಮಣ ಸವದಿ, ಟಿ. ರಘುಮೂರ್ತಿ, ಎನ್.ವೈ. ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಡಾ. ಮಹೇಶ್ ಜೋಶಿ ಭಾಗವಹಿಸುವರು.
ದಿ. 9.10.24ರಂದು ಬೆಳಗ್ಗೆ 10.00 ಗಂಟೆಗೆ ಜಯದೇವ ಜಗದ್ಗುರುಗಳ ಜೀವನ ಮತ್ತು ಸಾಧನೆ ಕುರಿತು ವಿಷಯ ಚಿಂತನೆ ನಡೆಯಲಿದೆ. ಸಂಜೆ 6 ಗಂಟೆಗೆ ಜಯದೇವ ಜಗದ್ಗುರುಗಳ ಜಯಂತ್ಯುತ್ಸವದಲ್ಲಿ ಶ್ರೀ ಜ. ಪ್ರಸನ್ನಾನಂದ ವಾಲ್ಮೀಕಿ ಸ್ವಾಮಿಗಳು, ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಧಾರವಾಡ ಇವರುಗಳು ಸಾನ್ನಿಧ್ಯ ವಹಿಸುವರು. ಮುಖ್ಯಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ವಿ.ಸೋಮಣ್ಣ, ಶಾಸಕರಾದ ಎಂ. ಚಂದ್ರಪ್ಪ, ಕೆ.ಎಸ್. ನವೀನ್, ಜಿ.ಎಂ.ಸಿz್ದÉೀಶ್ವರ, ಜಿ.ಹೆಚ್. ತಿಪ್ಪಾರೆಡ್ಡಿ, ಎಚ್.ಎಸ್. ಶಿವಶಂಕರ್, ಡಾ. ಸಿ.ಎನ್. ಮಂಜುನಾಥ್, ಸಿ. ಸೋಮಶೇಖರ್ ಡಾ. ಕೆ.ಎಸ್. ರವೀಂದ್ರನಾಥ್, ಜಯವಿಭವಸ್ವಾಮಿ ಅವರುಗಳು ಭಾಗವಹಿಸುವರು.
ದಿ. 10.10.24ರಂದು ಸಂಜೆ 6 ಗಂಟೆಗೆ ನಡೆಯುವ ಜಯದೇವ ಜಗದ್ಗುರುಗಳವರ ಜಯಂತ್ಯುತ್ಸವದಲ್ಲಿ ಡಾ. ವೀರಭದ್ರ ಚನ್ನಮಲ್ಲ ದೇಶೀಕೇಂದ್ರ ಶಿವಾಚಾರ್ಯಸ್ವಾಮಿಗಳು, ಬೇಲಿಮಠದ ಶ್ರೀ ಶಿವರುದ್ರ ಸ್ವಾಮಿಗಳು, ಹಿರೇಮಠ ಸಂಸ್ಥಾನದ ಡಾ. ಮ.ಘ.ಚ. ಬಸವಲಿಂಗ ಸ್ವಾಮಿಗಳು ಭಾಲ್ಕಿ ಇವರುಗಳು ಸಾನ್ನಿಧ್ಯ ವಹಿಸುವರು. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಜಯದೇವ ದಿಗ್ವಿಜಯ ಸಂಸ್ಮರಣ ಸಂಪುಟ ಬಿಡುಗಡೆ ಮಾಡಲಿದ್ದಾರೆ. ಡಿ.ಕೆ. ಶಿವಕುಮಾರ್, ಬಸವರಾಜ ಹೊರಟ್ಟಿ, ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಶಿವಾನಂದ ಎಸ್. ಪಾಟೀಲ್, ವಿಜಯಸಂಕೇಶ್ವರ, ವಿಜಯಾನಂದ ಕಾಶಪ್ಪನವರ್ ಮುಖ್ಯಅತಿಥಿಗಳಾಗಿ ಭಾಗವಹಿಸುವರು.
ದಿ. 11.10.24 ರಂದು ಮಹಿಳಾ ಸಮಾವೇಶ ನಡೆಯಲಿದ್ದು, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ್, ಶಶಿಕಲಾ ಜೊಲ್ಲೆ, ಶ್ರೀಮತಿ ಕೆ. ಪೂರ್ಣಿಮಾ ಶ್ರೀನಿವಾಸ್, ಶ್ರೀಮತಿ ಎಸ್. ರಶ್ಮಿ ಭಾಗವಹಿಸುವರು.
ದಿ. 12.10.24 ರಂದು ಬೆಳಗ್ಗೆ 10.30 ಗಂಟೆಗೆ ಶರಣಸಂಸ್ಕøತಿ ಉತ್ಸವ ಹಾಗೂ ಜಾನಪದ ಕಲಾಮೇಳ ಆರಂಭವಾಗಲಿದ್ದು, ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಚಾಲನೆ ನೀಡುವರು. ಸಂಜೆ 4.30 ಗಂಟೆಗೆ ಮೇಲುದುರ್ಗದ ಶ್ರೀ ಮುರುಘಾಮಠದ ಆವರಣದಲ್ಲಿ ಶ್ರೀಗಳಿಗೆ ಭಕ್ತಿ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ಗಂಟೆಗೆ ಮಕ್ಕಳ ಸಂಭ್ರಮ ನಡೆಯಲಿದೆ.
ದಿ. 13.10.24ರಂದು ಶ್ರೀಮಠದ ಆವರಣದಲ್ಲಿ ಬೆಳಗ್ಗೆ 9.30 ಗಂಟೆಗೆ ಶ್ರೀ ಮುರಿಗೆ ಶಾಂತವೀರ ಸ್ವಾಮಿಗಳವರ ಮೂರ್ತಿಯ ಶೂನ್ಯಪೀಠಾರೋಹಣ,ಬೆಳಗ್ಗೆ 11 ಗಂಟೆಗೆ ಬಸವಣ್ಣನವರ ಮತ್ತು ಅಲ್ಲಮಪ್ರಭುದೇವರ ಭಾವಚಿತ್ರ ಹಾಗೂ ಪ್ರಾಚೀನ ಹಸ್ತಪ್ರತಿಗಳ ಮೆರವಣಿಗೆ, 11.30 ಗಂಟೆಗೆ ಜಯದೇವ ಜಂಗೀ ಕುಸ್ತಿ, ಶ್ವಾನ ಪ್ರದರ್ಶನ ನಡೆಯಲಿದೆ. ಸಂಜೆ 6 ಗಂಟೆಗೆ ಸಾಂಸ್ಕøತಿಕ ಸಮಾರಂಭ ನಡೆಯಲಿದ್ದು, ಡಾ.ಸಾರಂಗಧರ ದೇಶೀಕೇಂದ್ರ ಸ್ವಾಮಿಗಳು, ಶ್ರೀ ಶಿವಲಿಂಗಾನಂದ ಸ್ವಾಮಿಗಳು, ಶ್ರೀ ಶಿವಾನಂದ ಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಹಂಪಿ ವಿ.ವಿ. ಕುಲಪತಿ ಡಾ. ಪರಮಶಿವಮೂರ್ತಿ, ಮಹಿಮಾ ಜೆ.ಪಟೇಲ್, ಈ ಕೃಷ್ಣಪ್ಪ, ಸಂಗಮೇಶ್ ಬಬಲೇಶ್ವರ, ಬಿ.ಆರ್. ಅಶೋಕ್‍ಕುಮಾರ್, ಮಾರಸಂದ್ರ ಮುನಿಯಪ್ಪ, ಮಹಮ್ಮದ್ ರಫಿ ಪಾಷ ಮುಖ್ಯಅತಿಥಿಗಳಾಗಿ ಭಾಗವಹಿಸುವರು ಎಂದು ತಿಳಿಸಿದರು.
ಕೆ.ಸಿ.ನಾಗರಾಜ್, ಶ್ರೀಮತಿ ಸುನಿತಾ ಮಲ್ಲಿಕಾರ್ಜುನ್ ಮಾತನಾಡಿದರು.
ಗುರುಮಠಕಲ್‍ನ ಶ್ರೀ ಶಾಂತವೀರಗುರುಮುರುಘರಾಜೇಂದ್ರ ಸ್ವಾಮಿಗಳು, ಸಾಯಿಗಾವ, ಶ್ರೀ ಬಸವನಾಗಿದೇವ ಸ್ವಾಮಿಗಳು, ನಗರಸಭೆ ಸದಸ್ಯ ಕೆ.ಸಿ. ಸುರೇಶ್, ಎಸ್. ಪರಮೇಶ್, ಶ್ರೀಮತಿ ಮೋಕ್ಷ ರುದ್ರಸ್ವಾಮಿ, ಡಿ.ಎಸ್. ಮಲ್ಲಿಕಾರ್ಜುನ್, ಕಣಿವೆಮಾರಮ್ಮ ತಿಪ್ಪೇಸ್ವಾಮಿ, ವೀರಶೈವ ಸಮಾಜದ ಕಾರ್ಯದರ್ಶಿ ಪಿ. ವೀರೇಂದ್ರಕುಮಾರ್, ಶಶಿಧರಬಾಬು, ಅಂಜಿನಪ್ಪ, ಶ್ರೀಮತಿ ಲತಾ ಉಮೇಶ್, ಎಂ. ಶಂಕರಮೂರ್ತಿ ಇದ್ದರು.