ಮಂಗಳೂರು: ಧರ್ಮಸ್ಥಳದ ಸೌಜನ್ಯ ಕೇಸ್ ವಿಚಾರಕ್ಕೆ ಈಗ ಒಡನಾಡಿ ಸಂಸ್ಥೆ ಎಂಟ್ರಿಯಾಗಿದೆ. ಈ ಸಂಸ್ಥೆ ಈ ಮೊದಲು ಚಿತ್ರದುರ್ಗದ ಮುರುಘಾ ಶ್ರೀ ಮಠದ ಪ್ರಕರಣವನ್ನು ಇದೇ ಸಂಸ್ಥೆ ಬಯಲು ಮಾಡಿತ್ತು. ಇದೀಗ ಸೌಜನ್ಯ ಕೊಲೆ ಪ್ರಕರಣಕ್ಕೆ ನ್ಯಾಯ ಒದಗಿಸುವುದಕ್ಕೆ ಒಡನಾಡಿ ಸಂಸ್ಥೆ ನಿರ್ಧಾರ ಮಾಡಿದೆ.
ನಿನ್ನೆ ಈ ಬಗ್ಗೆ ಈಗಾಗಲೇ ಸೌಜನ್ಯ ಪರ ಹೋರಾಟಗಾರರನ್ನು ಭೇಟಿ ಮಾಡಿದ್ದಾರೆ. ರಾಜ್ಯಾದ್ಯಂತ ಹೋರಾಟ ಮಾಡಿ, ನ್ಯಾಯ ಒದಗಿಸಲು ನಿರ್ಧಾರ ಮಾಡಿದ್ದಾರೆ. ಸೌಜನ್ಯ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಕುಟುಂಬಕ್ಕೆ ನ್ಯಾಯಕೊಡಿಸಲು ಒಡನಾಡಿ ಸಂಸ್ಥೆ ಹೋರಾಟಕ್ಕೆ ಇಳಿದಿದ್ದು ಭಾರೀ ಸಂಚಲನ ಮೂಡಿಸಿದೆ.
ಧರ್ಮಸ್ಥಳ ಕ್ಷೇತ್ರದಲ್ಲಿ ನಡೆದ ಸೌಜನ್ಯ ಪ್ರಕರಣ ತಲೆ ತಗ್ಗಿಸುವಂತಹ ಘಟನೆ. ಅತ್ಯಾಚಾರ ಮಾಡಿದ ಪಾಪಿಗಳನ್ನ ಇನ್ನೂ ನ್ಯಾಯದ ಕಟ ಕಟೆಗೆ ತರಲಾಗಿಲ್ಲ. ದೇಶದ ಕಾನೂನಿಗೆ ಇದು ಸಾಧ್ಯವಾಗಿಲ್ಲ ಎಂಬುವುದು ನಗೆ ಪಾಟಿಲಿನ ಸಂಗತಿ. ಸಿಬಿಐ ಘನತೆಯನ್ನ ಉಳ್ಳಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತೆ ಮರುತನಿಖೆಯಾಗಬೇಕು. ನಾವು ಈ ಹೋರಾಟದಲ್ಲಿ ಕೈ ಜೋಡಿಸುತ್ತಿದ್ದೇವೆ ಎಂದು ಒಡನಾಡಿಯ ಸ್ಥಾಪಕ ಕಾರ್ಯದರ್ಶಿ ಸ್ಟಾನ್ಲಿ ಹೇಳಿದ್ದಾರೆ.