
ಭುವನೇಶ್ವರ್ : ಒಡಿಶಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ನಬಾ ಕಿಶೋರ್ ದಾಸ್ ಅವರು ಸಹಾಯಕ ಸಬ್ ಇನ್ಸ್‌ಪೆಕ್ಟರ್(ASI) ಹಾರಿಸಿದ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಇದಾದ ಕೆಲವೇ ಗಂಟೆಗಳ ನಂತರ ಅವರು ಚಿಕಿತ್ಸೆ ಫಲಿಸದೆ ನಿಧನರಾದರು.

ಜಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ವೃತ್ತದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿತ್ತು.
ಸಹಾಯಕ ಸಬ್ ಇನ್ಸ್‌ಪೆಕ್ಟರ್(ASI) ಸಚಿವರ ಎದೆಗೆ ಗುಂಡು ಹಾರಿಸಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ನಂತರ ಉತ್ತಮ ಚಿಕಿತ್ಸೆಗಾಗಿ ಅವರನ್ನು ವಿಮಾನದ ಮೂಲಕ ಭುವನೇಶ್ವರದ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ವೈದ್ಯರು ಅವರಿಗೆ ತುರ್ತು ಐಸಿಯು ನಲ್ಲಿ ಚಿಕಿತ್ಸೆ ನೀಡಲಾಯಿತು. ವೈದ್ಯರುಗಳ ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಆಸ್ಪತ್ರೆಯ ಹೇಳಿಕೆಯಲ್ಲಿ ತಿಳಿಸಲಾಗಿದೆ.

GIPHY App Key not set. Please check settings