ವರದಿ : ಸುರೇಶ್ ಪಟ್ಟಣ್
ಚಿತ್ರದುರ್ಗ,(ಜು.02) : ಸರ್ಕಾರ ನಾಗ ಮೋಹನ್ ದಾಸ ವರದಿಯನ್ನು ಜಾರಿ ಮಾಡುವಲ್ಲಿ ಮೀನಾಮೇಷ ಮಾಡುತ್ತಿದೆ, ಇದರ ಬಗ್ಗೆ ಶ್ರೀಗಳು ಧರಣಿಯನ್ನು ನಡೆಸುತ್ತಿದ್ದು ಇದನ್ನು ಸಹಾ ಸರ್ಕಾರ ನಿರ್ಲಕ್ಷ ಮಾಡಿದೆ. ಇದನ್ನು ಪ್ರತಿಭಟಿಸಿ ಜು.11 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯನ್ನು ಮುತ್ತಿಗೆ ಹಾಕಲಾಗುವುದು ಎಂದು ಬಿಎಸ್‍ಪಿಯ ರಾಜ್ಯ ಸಂಯೋಜಕರು, ಕರ್ನಾಟಕ ಉಸ್ತುವಾರಿಗಳಾದ ಮಾರಸಂದ್ರ ಮುನಿಯಪ್ಪ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎಸ್.ಸಿ. ಮತ್ತು ಎಸ್.ಟಿ. ಜನಾಂಗಕ್ಕೆ ಅನುಕೂಲವಾಗುವ ನಾಗ ಮೋಹನದಾಸ್ ವರದಿಯನ್ನು ಜಾರಿ ಮಾಡುವಂತೆ ಆಗ್ರಹಿಸಿ ನಾಯಕ ಜನಾಂಗದ ಶ್ರೀಗಳು ಬೆಂಗಳೂರಿನಲ್ಲಿ ಧರಣಿಯನ್ನು ನಡೆಸುತ್ತಿದ್ದು ಇಂದಿಗೆ 143 ದಿನವಾಗಿದೆ. ಇಷ್ಟಾದರೂ ಸಹಾ ಸರ್ಕಾರ ಇದುವರೆವಿಗೂ ಮುಖ್ಯಮಂತ್ರಿಗಳಾದಿಯಾಗಿ ಬಂದು ಬರೀ ಆಶ್ವಾಸನೆಯನ್ನು ನೀಡಿದ್ದಾರೆ ಹೊರೆತು ಭರವಸಯನ್ನು ಈಡೇರಿಸಿಲ್ಲ.
ನಾಗಮೋಹನದಾಸ್ ವರದಿಯಲ್ಲಿ ಎಸ್.ಸಿ. ಎಸ್.ಟಿ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಳ ಮಾಡುವಂತೆ ವರದಿಯನ್ನು ನೀಡಿದೆ ಇದನ್ನು ಮಾಡುವಲ್ಲಿ ಸರ್ಕಾರ ಮೀನಾಮೇಷ ಮಾಡುತ್ತಿದೆ. ಬೇರೆಯ ಜನಾಂಗದವರು ಮೀಸಲಾತಿಯ ಪ್ರಮಾಣವನ್ನು ಹೆಚ್ಚಳ ಮಾಡುವಂತೆ ಕೇಳದಿದ್ದರೂ ಸಹಾ ಅವರಿಗೆ ಮೀಸಲಾತಿಯಲ್ಲಿ ಹೆಚ್ಚಳ ಮಾಡಿದ್ದಾರೆ ಎಂದು ದೂರಿದರು.
ಸರ್ಕಾರ ಇದುವರೆವಿಗೂ ನಮ್ಮ ಮಾತನ್ನೂ ಕೇಳಿಲ್ಲ ಇದನ್ನು ಪ್ರತಿಭಟಿಸಿ ಜು.11 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಸಹಾ ಜಿಲ್ಲಾಧಿಕಾರಿಗಳ ಕಚೇರಿಯನ್ನು ಮುತ್ತಿಗೆ ಹಾಕುವುದರ ಮೂಲಕ ನ್ಯಾಯವನ್ನು ಪಡೆಯುತ್ತೇವೆ. ಈ ಸಮಯದಲ್ಲಿ ಏನಾದರೂ ಅದರೆ ನಾವು ಹೊಣೇಗಾರರಲ್ಲ ಇದಕ್ಕೆ ಸರ್ಕಾರವೇ ಹೊಣೆಯಾಗುತ್ತದೆ. ಸಂವಿಧಾನ ಬದ್ದವಾದ ಮೀಸಲಾತಿ ಹೆಚ್ಚಳ ಸಮಸ್ಯೆಯನ್ನು ಬಗರಹರಿಸದೇ ಸರ್ಕಾರ ವಿಳಂಭ ಮಾಡುತ್ತಿದೆ ಇದನ್ನು ನಾವು ಸಹಿಸುವುದಿಲ್ಲ ಎಂದು ಮುನಿಯಪ್ಪ ತಿಳಿಸಿದರು.
ಗೋಷ್ಠಿಯಲ್ಲಿ ನಾಯಕ ಜನಾಂಗದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ತಾಲ್ಲೂಕು ಅಧ್ಯಕ್ಷ ಬಿ.ಕಾಂತರಾಜ್, ಬಿಎಸ್.ಪಿ.ಯ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ ಗೀರೀಶ್, ರಾಜ್ಯ ಪ್ರಧಾನ ಕಾರ್ಯದರ್ಶೀ ಅಶೋಕ ಚಕ್ರವರ್ತಿ, ರಾಜ್ಯ ಕಾರ್ಯದರ್ಶಿ ಪ್ರಕಾಶ್, ವಾಲ್ಮೀಕಿ ಸಮಾಜದ ಮುಖಂಡರಾದ ಶ್ರೀನಿವಾಸ್, ಯಶೋಧ, ಶಿವಪ್ಪ, ಅರುಣ್ ಕುಮಾರ್, ಕಾಂತಣ್ಣ, ರಾಜು, ನಗರಸಭಾ ಸದಸ್ಯರಾದ ವೆಂಕಟೇಶ್ ಸೇರಿದಂತೆ ಇತರರು ಹಾಜರಿದ್ದರು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…