ಜುಲೈ 15ಕ್ಕೆ ರಾಜ್ಯದಾದ್ಯಂತ ‘ಓ ಮೈ ಲವ್’ ತೆರೆಗೆ

2 Min Read

 

ಚಿತ್ರದುರ್ಗ,(ಜು.01) : ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳ ಪೈಕಿ ‘ಓ ಮೈ ಲವ್’ ಮುಂಚೂಣಿಯಲ್ಲಿದೆ. ಹಾಡುಗಳು, ಟೀಸರ್, ಗ್ಲಿಂಪ್ಸ್ ಹಾಗೂ ಟ್ರೇಲರ್ ಮೂಲಕ ಸದ್ದು ಮಾಡಿರುವ ಈ ಸಿನಿಮಾಕ್ಕೆ ದಿನದಿಂದ ದಿನಕ್ಕೆ ನಿರೀಕ್ಷೆ ಹೆಚ್ಚುತ್ತಲೇ ಇದೆ. ಅಕ್ಷಿತ್ ಶಶಿಕುಮಾರ್ ಹಾಗೂ ಕೀರ್ತಿ ಕಲ್ಕೆರಿ ಪ್ರಮುಖ ಭೂಮಿಕೆಯಲ್ಲಿರುವ ಈ ಸಿನಿಮಾ ಜುಲೈ 15ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ಎಂದು ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಡೈರೆಕ್ಷನ್ ಮಾಡಿರುವ ಸ್ಟೈಲ್ ಶ್ರೀನು ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸೆಂಚುರಿ ಸ್ಟಾರ್ ಶಿವರಾಜ್‍ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ತೆಲುಗು ಚಿತ್ರರಂಗದ ಸಿನಿಮಾಬ್ರಹ್ಮ ಕೆ.ರಾಘವೇಂದ್ರರಾವ್, ಮಾಜಿ ಪೊಲೀಸ್ ಆಯುಕ್ತರಾದ, ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಡು ಹಾಗೂ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಇದೀಗ ರಾಜಕೀಯ ಧುರೀಣ ಶ್ರೀರಾಮುಲು ‘ಓ ಮೈ ಲವ್’ ಟ್ರೇಲರ್ ಬಿಡುಗಡೆ ಮಾಡಿಕೊಟ್ಟು ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ ಎಂದರು.

ಈ ಸಿನಿಮಾಕ್ಕೆ ಕಥೆ ಬರೆದು ಜಿ.ಸಿ.ಬಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಜಿ.ರಾಮಾಂಜಿನಿ ನಿರ್ಮಿಸಿದ್ದಾರೆ. ಚಿತ್ರದ ಎಲ್ಲಾ ಹಾಡುಗಳಿಗೆ ಡಾ.ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದು ಚರಣ್ ಅರ್ಜುನ್ ಸಂಗೀತ ಸಂಯೋಜಿಸಿದ್ದಾರೆ. ಮುರಳಿ ನೃತ್ಯ ನಿರ್ದೇಶನ ಹಾಡುಗಳಿಗಿದೆ. ಎಸ್.ನಾರಾಯಣ್, ಸಾಧುಕೋಕಿಲ, ದೇವಗಿಲ್, ಟೆನ್ನಿಸ್ ಕೃಷ್ಣ, ಪವಿತ್ರಾ ಲೋಕೇಶ್ ಹಾಗೂ ಸಂಗೀತಾ, ದೀಪಿಕಾ ಆರಾಧ್ಯ, ಪೃಥ್ವಿರಾಜ್, ಆನಂದ್, ಶಿಲ್ಪಾ ರವಿ, ಭಾಗ್ಯಶ್ರೀ, ರಾಮ್ ಕುಮಾರ್ ಸೇರಿದಂತೆ ಮೊದಲಾದವರು ಚಿತ್ರದ ತಾರಾಗಣದಲ್ಲಿದ್ದಾರೆ. ಎ2 ಮ್ಯೂಸಿಕ್ ಯೂಟ್ಯೂಬ್ ಚಾನಲ್’ನಲ್ಲಿ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆಯಾಗಿದೆ.

ಅಕ್ಷಿತ್ ಶಶಿಕುಮಾರ್ ಮಾತನಾಡಿ, ನಮಗೆ ಎರಡನೇ ಮನೆ ಅಂದರೆ ಚಿತ್ರದುರ್ಗ. ನನ್ನ ತಂದೆ ಸಂಸದರಾದಾಗ ಹೆಚ್ಚಿನ ಸಮಯವನ್ನು ಇಲ್ಲಿಯೇ ಕಳೆದಿದ್ದೆನೆ. ಇದು ನನ್ನ ಮೊದಲೇ ಚಿತ್ರವಾಗಿದೆ ಎಲ್ಲರ ಸಹಕಾರದಿಂದ ಚಿತ್ರ ಉತ್ತಮವಾಗಿ ಬಂದಿದೆ. ಜು.15 ರಂದು ಬಿಡುಗಡೆಯಾಗಲಿದೆ. ಸಿನಿಮಾ ಮಂದಿರದಲ್ಲಿಯೇ ಹೋಗಿ ನೋಡಿ ಇದರಲ್ಲಿ ಎಲ್ಲಾ ರೀತಿಯ ಮಾಹಿತಿ ಇದೆ. ಚಿತ್ರ ಬೋರ್ ಆಗುವುದಿಲ್ಲ ಎಂದರು.

ಗೋಷ್ಟಿಯಲ್ಲಿ ಅಕ್ಷತಾ ಸೇರಿದಂತೆ ಇತರರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *