ಬೆಂಗಳೂರು : ದೇಶಾದ್ಯಂತ ಓಮಿಕ್ರಾನ್ ಪ್ರಕರಣಗಳು ದಿನದಿಂದ ದಿನಕ್ಕೆ ಕ್ರಮೇಣವಾಗಿ ಹೆಚ್ಚುತ್ತಿವೆ. ಇಂದು (ಸೋಮವಾರ) ದೆಹಲಿಯಲ್ಲಿ ಎರಡು, ಕರ್ನಾಟಕದಲ್ಲಿ ಐದು ಮತ್ತು ಕೇರಳದಲ್ಲಿ ನಾಲ್ಕು ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ದೇಶಾದ್ಯಂತ ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 167 ಕ್ಕೆ ತಲುಪಿದೆ.
ಉಡುಪಿಯಲ್ಲಿ ಎರಡು, ಧಾರವಾಡ, ಭದ್ರಾವತಿ ಮತ್ತು ಮಂಗಳೂರಿನಲ್ಲಿ ತಲಾ ಒಂದು ಓಮಿಕ್ರಾನ್ ಪ್ರಕರಣಗಳಿವೆ. ಸೋಂಕಿತರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಕೇಂದ್ರಆರೋಗ್ಯ ಸಚಿವಾಲಯ ಅಧಿಕಾರಿಗಳ ಪ್ರಕಾರ, ಓಮಿಕ್ರಾನ್ ಪ್ರಕರಣಗಳಿರುವ ರಾಜ್ಯಗಳು : ಮಹಾರಾಷ್ಟ್ರ (54), ದೆಹಲಿ (24), ರಾಜಸ್ಥಾನ (17), ಕರ್ನಾಟಕ (19), ತೆಲಂಗಾಣ (20), ಗುಜರಾತ್ (11), ಕೇರಳ (15) ಮತ್ತು ಆಂಧ್ರಪ್ರದೇಶ (1), ಚಂಡೀಗಢ (1), ತಮಿಳುನಾಡು (1) ಮತ್ತು ಪಶ್ಚಿಮ ಬಂಗಾಳ (4) ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 6563 ಕರೋನ ವೈರಸ್ ಪ್ರಕರಣಗಳು ಪತ್ತೆಯಾಗಿವೆ. 132 ಸಾವನ್ನಪ್ಪಿದ್ದಾರೆ. 8,077 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೂ ಒಟ್ಟು 3,41,87,017 ಜನರು ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ವೈದ್ಯಕೀಯ ಇಲಾಖೆ ತಿಳಿಸಿದೆ. ಭಾರತದಲ್ಲಿ 82,267 ಸಕ್ರಿಯ ಪ್ರಕರಣಗಳಿವೆ. ಇದು ಕಳೆದ 572 ದಿನಗಳಲ್ಲಿ ಅತ್ಯಂತ ಕಡಿಮೆಯಾಗಿದೆ. ದೇಶದಲ್ಲಿ ಇದುವರೆಗೆ 137.67 ಕೋಟಿ ಡೋಸ್ ಲಸಿಕೆಯನ್ನು ನೀಡಲಾಗಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…