ಚಿತ್ರದುರ್ಗ. ಆ.23: ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಇದೇ ಆಗಸ್ಟ್ 27 ಮತ್ತು 28 ರಂದು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲ್ಲೂಕುಗಳಿಗೆ ಖುದ್ದಾಗಿ ಭೇಟಿ ನೀಡಿ ಸಾರ್ವಜನಿಕರಿಂದ ದೂರು ಹಾಗೂ ಅವಹಾಲು ಸ್ವೀಕರಿಸುವರು.
ಇದೇ ಆಗಸ್ಟ್ 27ರಂದು ಮಂಗಳವಾರ ಬೆಳಿಗ್ಗೆ 10.30 ರಿಂದ 1.30 ರವರೆಗೆ ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ ಹಾಗೂ ಹೊಸದುರ್ಗ ಪುರಸಭೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಳ್ಳಕೆರೆ ನಗರಸಭೆ ಹಾಗೂ ಹೊಳಲ್ಕೆರೆ ಪುರಸಭೆಯಲ್ಲಿ ಅಹವಾಲು ಸ್ವೀಕರಿಸುವರು.

ಆಗಸ್ಟ್ 28ರಂದು ಬುಧವಾರ ಬೆಳಿಗ್ಗೆ 10.30 ರಿಂದ 1.30 ರವರೆಗೆ ಹಿರಿಯೂರು ನಗರಸಭೆ ಕಚೇರಿಯಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5.30ರವರೆಗೆ ಚಿತ್ರದುರ್ಗ ನಗರಸಭೆ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಲು ಅಲ್ಲಿನ ಅಧಿಕಾರಿ, ಸಿಬ್ಬಂದಿ ಲಂಚಕ್ಕಾಗಿ ಬೇಡಿಕೆ, ಯೋಜನೆಗಳ ಅನುಷ್ಠಾನದಲ್ಲಿ ಅನಾವಶ್ಯಕ ವಿಳಂಬ, ಕರ್ತವ್ಯದಲ್ಲಿ ನಿರ್ಲಕ್ಷತನ, ತಾರತಮ್ಯ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಲಾಭ ಸರಿಯಾದ ರೀತಿಯಲ್ಲಿ ತಲುಪಿಸದೇ ಇರುವ ಕುರಿತು ಸಾರ್ವಜನಿಕರು ನಿಗದಿತ ಅರ್ಜಿ ನಮೂನೆಯಲ್ಲಿ ದೂರು ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















