Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಡಿಸೆಂಬರ್ 10 ರಂದು ಎಸ್. ನಿಜಲಿಂಗಪ್ಪರವರ 121ನೇ ಜನ್ಮದಿನಾಚರಣೆ ಮತ್ತು ನೂತನ ಶಾಸಕರುಗಳಿಗೆ ಅಭಿನಂದನಾ ಸಮಾರಂಭ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಡಿ. 07. ಎಸ್. ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ (ರಿ), ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರನಾಯಕ ಎಸ್.ನಿಜಲಿಂಗಪ್ಪರವರ 121ನೇ ಜನ್ಮದಿನಾಚರಣೆ ಮತ್ತು ಜಿಲ್ಲೆಯ ನೂತನ ಶಾಸಕರುಗಳಿಗೆ ಅಭಿನಂದನಾ ಸಮಾರಂಭವೂ ಡಿ.10ರ ಬೆಳ್ಳಿಗೆ 11ಕ್ಕೆ ಸಿಬಾರದ ಎಸ್.ಎನ್.ಸ್ಮಾರಕದ ಪುಣ್ಯಭೂಮಿಯಲ್ಲಿ ನಡೆಯಲಿದೆ ಎಂದು ಟ್ರಸ್ಟ್‍ನ ಗೌರವ ಕಾರ್ಯದರ್ಶಿಗಳಾದ ಹೆಚ್.ಹನುಮಂತಪ್ಪ ತಿಳಿಸಿದ್ದಾರೆ.

ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಎಸ್.ಎನ್.ಟ್ರಸ್ಟ್‍ನ ಅಧ್ಯಕ್ಷರು, ಮಾಜಿ ಸಚಿವರು ಹಾಲಿ ಶಾಸಕರಾದ ಶಾಮನೂರು ಶಿವಶಂಕರಪ್ಪ ವಹಿಸಲಿದ್ದಾರೆ. ಎಸ್.ಎನ್.ಟ್ರಸ್ಟ್‍ನ ಉಪಾಧ್ಯಕ್ಷರಾದ ಪ್ರೋ.ಎಸ್.ಎನ್.ಕಿರಣ್ ಶಂಕರ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಯೋಜನಾ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ನೇರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲೆಯ ಶಾಸಕರುಗಳಾದ ಕೆ.ಸಿ.ವಿರೇಂದ್ರ, ಬಿ.ಜಿ.ಗೋವಿಂದಪ್ಪ, ಎನ್.ವೈ ಗೋಪಾಲಕೃಷ್ಣ, ಎಂ.ಚಂದ್ರಪ್ಪ, ಟಿ.ರಘುಮೂರ್ತಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್‍ರವರನ್ನು ಅಭಿನಂದಿಸಲಾಗುವುದು ಎಂದು ಎಸ್.ಷಣ್ಮುಖಪ್ಪ ಮತ್ತು ತಾಜ್‍ಪೀರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...