Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆಬ್ರವರಿ 17 ರಂದು ಹೆಚ್.ಡಿ. ಪುರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ | ಈ ಸಮಸ್ಯೆ ಇರುವವರು  ನೊಂದಾಯಿಸಿಕೊಳ್ಳಿ….!

---Advertisement---

 

ವರದಿ ಮತ್ತು ಫೋಟೋ ಕೃಪೆ :
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಫೆ. 15 : ರೋಟರಿ ಬೆಂಗಳೂರು ಸೌತ್ ಪರೇಡ್, ರೋಟರಿ ಚಿತ್ರದುರ್ಗ ಕ್ಲಬ್ ಐಡಿ : 15714, ಎಂ.ಎಸ್. ರಾಮಯ್ಯ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ಉಚಿತ ಬೃಹತ್ ಆರೋಗ್ಯ ತಪಾಸಣೆ ಶಿಬಿರವು  ದಿನಾಂಕ : 17-02-2024, ಶನಿವಾರ ಹೊಳಲ್ಕೆರೆ ತಾ, ಹೆಚ್.ಡಿ.ಪುರದ ಬನಶಂಕರಿ ಸಮುದಾಯ ಭವನದಲ್ಲಿ ಬೆಳಗ್ಗೆ 10:00 ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿಯ ನಿವೃತ್ತ ಜಿಲ್ಲಾಪಾಲರು ಮಧುಪ್ರಸಾದ್. ಕೆ ರೋಟರಿ ಅಧ್ಯಕ್ಷರಾದ ಕನಕರಾಜು ತಿಳಿಸಿದ್ದಾರೆ.

ಈ ಶಿಬಿರದಲ್ಲಿ ಸಾಮಾನ್ಯ ರೋಗ ವಿಭಾಗ, ಮಕ್ಕಳ ವಿಭಾಗ, ಚರ್ಮರೋಗ ವಿಭಾಗ, ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ,  ಸಾಮಾನ್ಯ ಶಸ್ತ್ರ ಚಿಕಿತ್ಸಾ ವಿಭಾಗ ಶ್ವಾಸಕೋಶ ವಿಭಾಗ ಕ್ಯಾನ್ಸರ್ ವಿಭಾಗ ಕಿವಿ, ಮೂಗು ಮತ್ತು ಗಂಟಲು ವಿಭಾಗ,  ಮೂಳೆ ಮತ್ತು ಕೀಲು ರೋಗ ವಿಭಾಗ,  ಸ್ತ್ರೀ ರೋಗ ವಿಭಾಗ,  ಬಿಪಿ ಮತ್ತು ಸಕ್ಕರೆ ಖಾಯಿಲೆ ವಿಭಾಗ,  ಹಲ್ಲಿನ ಚಿಕಿತ್ಸಾ ವಿಭಾಗ,  ಫಿಸಿಯೋಥೆರಪಿ,  ಶಿಬಿರದಲ್ಲಿ ಆಯ್ಕೆಯಾಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಅಥವಾ ಶಸ್ತ್ರ ಚಿಕಿತ್ಸೆಗೆ ದಾಖಲಾಗುವಂತಹ ಎಲ್ಲಾ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡಲಾಗುವುದು.

ಈ ಶಿಬಿರದಲ್ಲಿ ನುರಿತ ತಜ್ಞ ವೈದ್ಯರುಗಳು ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಲಿದ್ದು. ಸುತ್ತಮುತ್ತಲಿನ ಗ್ರಾಮಸ್ಥರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...