Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾರ್ಚ್ 01 ರಂದು ಕರುವಿನಕಟ್ಟೆ ಸರ್ಕಾರಿ ಶಾಲೆಯಲ್ಲಿ ಗುರುವಂದನೆ ಕಾರ್ಯಕ್ರಮ

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 27: ಜೋಗಿಮಟ್ಟಿ ರಸ್ತೆಯಲ್ಲಿರುವ ಕರುವಿನಕಟ್ಟೆ ಸರ್ಕಾರಿ ಶಾಲೆಯಲ್ಲಿ  ಮಾರ್ಚ್ 01, ಶನಿವಾರ ಬೆಳಗ್ಗೆ 10ಕ್ಕೆ ಗುರುವಂದನೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹಳೇ ವಿದ್ಯಾರ್ಥಿಗಳ ಒಕ್ಕೂಟ ತಿಳಿಸಿದೆ.

 

1980-81ರ ಸಾಲಿನ ವಿದ್ಯಾರ್ಥಿಗಳು ಒಕ್ಕೂಟ ರಚಿಸಿಕೊಂಡು ಕಾರ್ಯಕ್ರಮ ಆಯೋಜಿಸಿದ್ದಾರೆ. ಈಗಾಗಲೇ ಶಾಲೆ ಛಾವಣಿ, ಆವರಣ ಸೇರಿ ಎಲ್ಲೆಡೆ ಸ್ವಚ್ಛತೆ ಕಾರ್ಯ ಪೂರ್ಣಗೊಂಡಿದ್ದು, ಶನಿವಾರ ಬೆಳಗ್ಗೆ ತಮಗೆ ಅಕ್ಷರ ಕಲಿಸಿದ ಶಿಕ್ಷಕರನ್ನು ಗೌರವಿಸುವ ಜೊತೆಗೆ ಹಳೇ ವಿದ್ಯಾರ್ಥಿಗಳು ಮುಖಾಮುಖಿ ಆಗಲಿದ್ದಾರೆ. ನಗರಸಭೆ ಹಾಲಿ-ಮಾಜಿ ಸದಸ್ಯರು, ಗುತ್ತಿಗೆದಾರರು, ಭದ್ರಾ ಮೇಲ್ದಂಡೆ ಯೋಜನೆ ಹೋರಾಟ ಸಮಿತಿ ಸಂಚಾಲಕರು, ಪತ್ರಕರ್ತರು, ವಿವಿಧ ಹುದ್ದೆಗಳಲ್ಲಿರುವ ಎಲ್ಲರೂ ಒಗ್ಗೂಡಲಿದ್ದಾರೆ. ಇದೊಂದು ಅವಿಸ್ಮರಣೀಯ ಕಾರ್ಯಕ್ರಮ ಆಗಲಿದ್ದು, ಈ ಸಾಲಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಕ್ಷಕರನ್ನು ಗೌರವಿಸುವ ಜತೆಗೆ ಕಾರ್ಯಕ್ರಮಕ್ಕೆ ಮೆರುಗು ತರಬೇಕೆಂದು ಸಂಘಟಕರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment