ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ. 01 : ಚಿತ್ರದುರ್ಗ ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್‍ಗೆ ಜ.12 ರಂದು ನಿರ್ದೇಶಕರುಗಳ ಆಯ್ಕೆಗೆ ನಡೆಯುವ ಚುನಾವಣೆಗೆ ಸಾಲಗಾರರಲ್ಲದ ಕ್ಷೇತ್ರದಿಂದ ಮಾರಘಟ್ಟದ ನಂದಿ ನಾಗರಾಜ್ ಜ.1 ರಂದು ಪಿ.ಎಲ್.ಡಿ. ಬ್ಯಾಂಕ್‍ನಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೆ ಜ.4 ಕಡೆ ದಿನವಾಗಿದ್ದು, 5 ರಂದು ಪರಿಶೀಲನೆ, ನಾಮಪತ್ರ ಹಿಂದಕ್ಕೆ ಪಡೆಯಲು 6 ಕಡೆಯ ದಿನವಾಗಿರುತ್ತದೆ.