ಚಿತ್ರದುರ್ಗ ಜ. 26 : ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಜ. 28 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
ಉಪಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ ಕೊಪ್ಪಳದಿಂದ ಹೊರಟು, ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು. ನಂತರ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಪೀಠದ ಪಕ್ಕದ ಮೈದಾನದಲ್ಲಿ ಕರ್ನಾಟಕ ಶೋಷಿತ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತ ಆಶ್ರಯದ “ಶೋಷಿತ ಜಾಗೃತಿ ಸಮಾವೇಶ” ದಲ್ಲಿ ಭಾಗವಹಿಸುವರು.
ಉಪಮುಖ್ಯಮಂತ್ರಿಗಳು ಅದೇ ದಿನ ಬೆಳಿಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಉಪಮುಖ್ಯಮಂತ್ರಿಗಳ ಹೆಚ್ಚುವರಿ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.