Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜುಲೈ 16 ರಂದು ರಂಗಕರ್ಮಿ ಕೆ.ವಿ ಸುಬ್ಬಣ್ಣ ಸ್ಮರಣೋತ್ಸವ : ಕನ್ನಡ ಗೀತಗಾಯನ ತರಬೇತಿ ಕಾರ್ಯಾಗಾರ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜುಲೈ. 14 : ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಆಶ್ರಯದಲ್ಲಿ ನೀನಾಸಂ ಸಂಸ್ಥಾಪಕ ಸದಸ್ಯ, ರಂಗಕರ್ಮಿ ಕೆ.ವಿ ಸುಬ್ಬಣ್ಣ ಸ್ಮರಣೋತ್ಸವ ಅಂಗವಾಗಿ ಕನ್ನಡ ಗೀತಗಾಯನ ತರಬೇತಿ ಕಾರ್ಯಾಗಾರ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಜುಲೈ 16 ರಂದು ಗುರುವಾರ ಬೆಳಿಗ್ಗೆ 10-30ಕ್ಕೆ ಶ್ರೀ ಸಿದ್ಧರಾಮೇಶ್ವರ ವಸತಿ ಪ್ರೌಢಶಾಲಾ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಏರ್ಪಡಿಸಲಾಗಿದೆ.

ಶಿಕ್ಷಣತಜ್ಞ ಮತ್ತು ನಾಟಕಕಾರ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯಶಿಕ್ಷಕ ಆನಂದ ತಳವಾರ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ಎಂ.ಎನ್.ಯೋಗೀಶ್ ಇವರು ರಂಗಕರ್ಮಿ ಕೆ.ವಿ.ಸುಬ್ಬಣ್ಣ ಬದುಕು ಬರಹ ಕುರಿತು ಉಪನ್ಯಾಸ ನೀಡಲಿದ್ದಾರೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಭೋವಿ ಗುರುಪೀಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೌನಹಳ್ಳಿ ಗೋವಿಂದಪ್ಪ, ವರದಿಗಾರ ಈ.ಮಹೇಶ್‍ಬಾಬು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.

 

ಇದೇ ಸಂದರ್ಭದಲ್ಲಿ ಡಿವಿಜಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕøತ ಹಿರಿಯ ಪತ್ರಕರ್ತ ಶ.ಮಂಜುನಾಥ ಹಾಗೂ ಕಥಾಸ್ಪರ್ಧೆ ರಾಜ್ಯ ಪ್ರಶಸ್ತಿ ವಿಜೇತ ಪತ್ರಕರ್ತ ಕೆ.ಪಿ.ಓಂಕಾರಮೂರ್ತಿ ಇವರನ್ನು ಸನ್ಮಾನಿಸಿ ಗೌರವಿಸಲಾಗುವುದು. ನೀನಾಸಂ ಪದವೀಧರ ಹಾಗೂ ರಂಗನಿರ್ದೇಶಕ ಕೆಪಿಎಂ. ಗಣೇಶಯ್ಯ ಕನ್ನಡ ಗೀತಗಾಯನ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸರ್ಕಾರ ನಿಗಧಿಪಡಿಸಿದ ಸಂಗೀತ ಸಂಯೋಜನೆಯ ನಾಡಗೀತೆ, ರೈತಗೀತೆ, ರಾಷ್ಟ್ರಗೀತೆ, ವಂದೇಮಾತರಂ ಹಾಗೂ ಧ್ವಜಗೀತೆಗಳನ್ನು ಶ್ರೀ ಸಿದ್ಧರಾಮೇಶ್ವರ ವಸತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದ್ದಾರೆ ಎಂದು ರಂಗಸೌರಭ ಕಲಾ ಸಂಘದ ಅಧ್ಯಕ್ಷ ಡಾ.ಕೆ ಮೋಹನ್‍ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now