ದಾವಣಗೆರೆ.ಜೂ.26 : ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 27 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಗರದಲ್ಲಿ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯಾನಗರ ಎಫ್.14 ಫೀಡರ್ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್‍ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











