Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾರ್ಚ್ 04 ರಂದು ಮುಖ್ಯಮಂತ್ರಿಗಳು ಯಾವೆಲ್ಲಾ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮಾಡಲಿದ್ದಾರೆ ? ಇಲ್ಲಿದೆ ಸಂಪೂರ್ಣ ಮಾಹಿತಿ…!

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ (ಮಾ. 03) : ಮಾ. 04 ರಂದು ಬೆ. 11 ಗಂಟೆಗೆ ನಗರದ ವಿಜ್ಞಾನ ಕಾಲೇಜು ಮೈದಾನದಲ್ಲಿ ಜರುಗುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ನೆರವೇರಿಸುವರು.

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಂದ ಮಾ. 04 ರಂದು ಉದ್ಘಾಟನೆಗೊಳ್ಳಲಿರುವ ವಿವಿಧ ಕಾಮಗಾರಿಗಳ ವಿವರ ಇಂತಿದೆ.

ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ 218.90 ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳು.  01 ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲ ಕಚೇರಿ ಕಟ್ಟಡ.

4.95 ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗ ನಗರದಲ್ಲಿನ ಪ್ರವಾಸಿ ಮಂದಿರ ಕಟ್ಟಡ.  6 ಕೋಟಿ ರೂ. ವೆಚ್ಚದಲ್ಲಿ ಕುಟೀರ ಯೋಜನೆಯಡಿ ಹಿರೇಗುಂಟನೂರು ಹೋಬಳಿ ಮಾರಘಟ್ಟ ಗ್ರಾಮದಲ್ಲಿ ಪ್ರವಾಸಿಗರಿಗೆ ಅತ್ಯುತ್ತಮ ದರ್ಜೆಯ ಮೂಲಸೌಲಭ್ಯ ಒದಗಿಸುವ ಕಾಮಗಾರಿ.

ಭದ್ರಾ ಮೇಲ್ದಂಡೆ ಯೋಜನೆಯಡಿ 14.30 ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗ ನಗರದಲ್ಲಿ ವಿವಿಧ ಸಿ.ಸಿ. ರಸ್ತೆಗಳು ಮತ್ತು ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಮತ್ತು ಚೆಕ್ ಡ್ಯಾಂಗಳ ನಿರ್ಮಾಣ.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ 5.65 ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗ ನಗರದಲ್ಲಿ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, 7.95 ಕೋಟಿ ರೂ. ವೆಚ್ಚದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, 15 ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗ ತಾಲ್ಲೂಕು ಕಡ್ಲೆಗುದ್ದು ಗ್ರಾಮದಲ್ಲಿ ನಿರ್ಮಿಸಿರುವ ಇಂದಿರಾಗಾಂಧಿ ವಸತಿ ಶಾಲೆ, 6.32 ಕೋಟಿ ರೂ. ವೆಚ್ಚದಲ್ಲಿ ನಗದ ಪ್ರವಾಸಿ ಮಂದಿರ ಹಿಂಭಾಗದಲ್ಲಿ ನಿರ್ಮಿಸಿರುವ ಲಿಡ್ಕರ್ ಕುಶಲ ಕರ್ಮಿಗಳ ವಾಣಿಜ್ಯ ಸಂಕೀರ್ಣ, 7.75 ಕೋಟಿ ರೂ. ವೆಚ್ಚದಲ್ಲಿ ಶಿವಶರಣ ಮಾದಾರ ಚನ್ನಯ್ಯ ಭವನ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 2.35 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ನಿರ್ಮಿಸಿರುವ ಮೌಲಾನ ಆಜಾದ್ ಅಬ್ದುಲ್ ಶಾಲೆ, 10 ಕೋಟಿ ರೂ. ವೆಚ್ಚದ ಮುರಾರ್ಜಿ ದೇಸಾಯಿ ಬಾಲಕಿಯರ ಪಿಯು ವಸತಿ ಕಾಲೇಜು.

ಪೊಲೀಸ್ ಇಲಾಖೆ ವ್ಯಾಪ್ತಿಯಡಿ 4.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಜಿಲ್ಲಾ ಸಶಸ್ತ್ರ ಪಡೆ ಆಡಳಿತ ಕಚೇರಿ.  2.08 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ಕೋಟೆ ಪೊಲೀಸ್ ಠಾಣೆ, 2.08 ಕೋಟಿ ರೂ. ವೆಚ್ಚದಲ್ಲಿ ಬಡಾವಣೆ ಪೊಲೀಸ್ ಠಾಣೆ ಕಟ್ಟಡ. ಜಿಲ್ಲಾ ಕೈಗಾರಿಕಾ ಕೇಂದ್ರದ 6.97 ಕೋಟಿ ರೂ. ವೆಚ್ಚದ ಎಂಎಸ್‍ಇ-ಸಿಡಿಪಿ ಕ್ಲಸ್ಟರ್ ಅಭಿವೃದ್ಧಿ ಕಾರ್ಯಕ್ರಮ.

ಕಾಲೇಜು ಶಿಕ್ಷಣ ಇಲಾಖೆಯಡಿ ನಗರದಲ್ಲಿ 1.99 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಕಲಾ ಕಾಲೇಜು ಬಾಲಕರ ‘ಎ’ ವಿದ್ಯಾರ್ಥಿ ನಿಲಯದ ಹೆಚ್ಚುವರಿ ಕಟ್ಟಡ ನಿರ್ಮಾಣ.

ನಿರ್ಮಿತಿ ಕೇಂದ್ರದಿಂದ 1.99 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ಮೆರಿಕ್ ನಂತರದ ಬಾಲಕರ ವಿಜ್ಞಾನ ಕಾಲೇಜು ಮತ್ತು ವಸತಿ ನಿಲಯ ಕಟ್ಟಡ.  1.99 ಕೋಟಿ ರೂ. ವೆಚ್ಚದಲ್ಲಿ ನಗರದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ.

ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ 18.97 ಕೋಟಿ ರೂ. ವೆಚ್ಚದಲ್ಲಿ 07 ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗಳು, 03 ಕೊಟಿ ರೂ. ವೆಚ್ಚದಲ್ಲಿ 05 ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳು, 12 ಕೋಟಿ ರೂ. ವೆಚ್ಚದಲ್ಲಿ ನಗರಕ್ಕೆ ನೀರು ಸರಬರಾಜಾಗುವ ಶಾಂತಿಸಾಗರ ಮತ್ತು ವಾಣಿವಿಲಾಸ ಸಾಗರ ರೇಚಕ ಘಟಕಗಳ ಮೇಲ್ದರ್ಜೆಗೇರಿಸುವುದು ಹಾಗೂ ನಗರದಲ್ಲಿ ಮೇಲ್ಮಟ್ಟಸ ನೀರು ಸಂಗ್ರಹಾಗಾರ ನಿರ್ಮಾಣ, 6.60 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ಒಳಚರಂಡಿ ವ್ಯವಸ್ಥೆ ಕಾಮಗಾರಿ.

ಆರೋಗ್ಯ ಇಲಾಖೆಯಡಿ 24 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ನಿರ್ಮಿಸಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ.

ಸಣ್ಣ ನೀರಾವರಿ ಇಲಾಖೆಯಡಿ ವಿಶೇಷ ಘಟಕ ಯೋಜನೆತಯಡಿ 22.75 ಕೋಟಿ ರೂ. ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ, ಗಿರಿಜನ ಉಪಯೋಜನೆಯಡಿ 9.25 ಕೋಟಿ ರೂ. ವೆಚ್ಚದಲ್ಲಿ ಚೆಕ್‍ಡ್ಯಾಂ ನಿರ್ಮಾಣ, ಡಿಎಂಎಫ್ ಯೋಜನೆಯಡಿ 18.60 ಕೋಟಿ ರೂ. ವೆಚ್ಚದಲ್ಲಿ ಚೆಕ್ ಡ್ಯಾಂ ಹಾಗೂ ಕೆರೆ ಅಭಿವೃದ್ಧಿ ಕಾಮಗಾರಿ, 16.50 ಕೋಟಿ ರೂ. ವೆಚ್ಚದಲ್ಲಿ ಅಣೆಕಟ್ಟು ಮತ್ತು ಪಿಕಪ್ ಚೆಕ್ ಡ್ಯಾಂ ನಿರ್ಮಾಣ, 5.50 ಕೋಟಿ ರೂ. ವೆಚ್ಚದಲ್ಲಿ ಕೆರೆಗಳ ಆಧುನೀಕರಣ ಯೋಜನೆಯಡಿ ಕೆರೆ ಅಭಿವೃದ್ಧಿ ಕಾಮಗಾರಿ, 01 ಕೋಟಿ ರೂ. ವೆಚ್ಚದಲ್ಲಿ ಅಟಲ್ ಭೂಜಲ ಯೋಜನೆಯಡಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಡಿ 61.32 ಕೋಟಿ ರೂ. ವೆಚ್ಚದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ 117 ಕಾಮಗಾರಿಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ 09.90 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಕಟ್ಟಡದ ಉದ್ಘಾಟನೆಯನ್ನು ಮುಖ್ಯಮಂತ್ರಿಗಳು ನೆರವೇರಿಸುವರು.
ಇದೇ ದಿನದಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಶಂಕುಸ್ಥಾಪನೆ, ಭೂಮಿಪೂಜೆ ನೆರವೇರಿಸಲಿದ್ದು, ವಿವರ ಇಂತಿದೆ.

ಭದ್ರಾ ಮೇಲ್ದಂಡೆ ಯೋಜನೆಯಡಿ 115.31 ಕೋಟಿ ರೂ. ವೆಚ್ಚದಲ್ಲಿ 07 ಹಳ್ಳಿಗಳ 1801 ಹೆ. ಅಚ್ಚುಕಟ್ಟು ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸುವ ಕಾಮಗಾರಿ ಹಾಗೂ 51.70 ಕೋಟಿ ರೂ. ವೆಚ್ಚದಲ್ಲಿ ನಗರ ಮತ್ತು ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಸಿ.ಸಿ. ರಸ್ತೆ ಅಭಿವೃದ್ಧಿ ಕಾಮಗಾರಿ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯಡಿ 592 ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗ ಮತ್ತು ಹಿರಿಯೂರು ತಾಲ್ಲೂಕಿನ ಮಾರ್ಗ ಮಧ್ಯದ ಜನವಸತಿಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವ ಕಾಮಗಾರಿ.

ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಡಿ 28.34 ಕೋಟಿ ರೂ. ವೆಚ್ಚದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳು 1.50 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲ ಕಚೇರಿ ಕಟ್ಟಡ ನಿರ್ಮಾಣದ 02ನೇ ಹಂತದ ಕಾಮಗಾರಿ, 08 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಚೇರಿ ಬಳಿ ಸಕ್ರ್ಯೂಟ್ ಹೌಸ್ ನಿರ್ಮಾಣ ಕಾಮಗಾರಿ, 6.50 ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ.ಜಾತಿ ಬಾಲಕಿಯರ ವಿದ್ಯಾರ್ಥಿ ನಿಲಯ ಕಾಮಗಾರಿ, 01 ಕೋಟಿ ರೂ. ವೆಚ್ಚದಲ್ಲಿ ಡಿ.ಎಸ್. ಹಳ್ಳಿಯಲ್ಲಿ ಧರ್ಮಶಿಲ್ಪ ಭವನ ನಿರ್ಮಾಣ.

ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ 16 ಕೋಟಿ ರೂ. ವೆಚ್ಚದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳು, 9.90 ಕೋಟಿ ರೂ. ವೆಚ್ಚದಲ್ಲಿ ನಗರಸಭೆ ವ್ಯಾಪ್ತಿಯ 12 ಪಾರ್ಕ್ ಗಳ ಅಭಿವೃದ್ಧಿ ಕಾಮಗಾರಿಗಳು, 04 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿನ ಮುಖ್ಯ ರಸ್ತೆ ಮತ್ತು ವೃತ್ತಗಳಲ್ಲಿ ಹಾಗೂ ಎಲ್ಲ ಸ್ಮಶಾನಗಳಿಗೆ ಬೆಳಕಿನ ವ್ಯವಸ್ಥೆಗಾಗಿ ಹೈಮಾಸ್ಟ್ ಮತ್ತು ಬೀದಿದೀಪ ಅಳವಡಿಕೆ ಕಾಮಗಾರಿಗಳು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ 3.35 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ಮೆಟ್ರಿಕ್ ನಂತರದ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಬಾಲಕಿಯರ ವಸತಿ ನಿಲಯ.

ಆರೋಗ್ಯ ಇಲಾಖೆಯಡಿ 14.17 ಕೋಟಿ ರೂ. ವೆಚ್ಚದಲ್ಲಿ 50 ಹಾಸಿಗೆಗಳ ಕ್ರಿಟಿಕಲ್ ಕೇರ್ ಘಟಕ.  ಕೃಷಿ ಇಲಾಖೆಯಡಿ 4.03 ಕೋಟಿ ರೂ. ವೆಚ್ಚದಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಪ್ರಮೋಷನ್ ಆಫ್ ಇಂಟೆಗ್ರಲ್ ಫಾರ್ಮಿಂಗ್ ಸಿಸ್ಟಂ ಕಟ್ಟಡ.

ಸಣ್ಣ ನೀರಾವರಿ ಇಲಾಖೆಯಡಿ 06 ಕೋಟಿ ರೂ. ವೆಚ್ಚದಲ್ಲಿ ಅಟಲ್ ಭೂಜಲ ಯೋಜನೆಯಡಿ ಚೆಕ್ ಡ್ಯಾಂ, 03 ಕೋಟಿ ರೂ. ಗಳಲ್ಲಿ ಕೆರೆಗಳ ಆಧುನೀಕರಣ ಯೋಜನೆಯಡಿ ಕೆರೆ ಅಭಿವೃದ್ಧಿ ಕಾಮಗಾರಿ, 05 ಕೋಟಿ ರೂ. ವೆಚ್ಚದಲ್ಲಿ ಕೆರೆಗಳ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಭೂಮಿಪೂಜೆ ನೆರವೇರಿಸುವರು.

ಒಟ್ಟಾರೆ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಡಿ ಒಟ್ಟು 1,484.69 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳು ನೆರವೇರಿಸುವರು.

ಈ ಪೈಕಿ 538.26 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ಹಲವು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಲಿದ್ದು, 946.33 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಗೆ ಶಂಕುಸ್ಥಾಪನೆ ನೆರವೇರಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

error: Content is protected !!