Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದಲ್ಲಿ ನವೆಂಬರ್ 11 ರಂದು ವೀರವನಿತೆ ಒನಕೆ ಓಬವ್ವ ಜಯಂತಿ ಅದ್ದೂರಿ ಆಚರಣೆಗೆ ಸಕಲ ಸಿದ್ದತೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 03 : ಇದೇ ತಿಂಗಳ 11 ರಂದು ಚಿತ್ರದುರ್ಗದಲ್ಲಿ ನಡೆಯುವ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಕುರಿತು ಛಲವಾದಿ ಜನಾಂಗದ ಮುಖಂಡರು ಭಾನುವಾರ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಸಿ ಕರಪತ್ರ ಬಿಡುಗಡೆಗೊಳಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಛಲವಾದಿ ಸಮಾಜದ ಮುಖಂಡ ಹೆಚ್.ಸಿ.ನಿರಂಜನಮೂರ್ತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ ಸಂಯುಕ್ತಾಶ್ರಯದಲ್ಲಿ ನಡೆಯುವ ಒನಕೆ ಓಬವ್ವ ಜಯಂತಿಗೆ ಛಲವಾದಿ ಜನಾಂಗದವರೆಲ್ಲಾ ಸೇರಿ ಕೈಜೋಡಿಸಿ ಊರಿನ ಹಬ್ಬದ ರೀತಿಯಲ್ಲಿ ಆಚರಿಸಿ ಒನಕೆ ಓಬವ್ವಳ ಸಾಹಸ, ದಿಟ್ಟತನವನ್ನು ಮುಂದಿನ ಪೀಳಿಗೆಗೆ ಪರಿಚಯಿಸೋಣ ಎಂದರು.

 

ಅಂದು ಬೆಳಿಗ್ಗೆ 8-30 ಕ್ಕೆ ಹೊಳಲ್ಕೆರೆ ರಸ್ತೆಯಲ್ಲಿರುವ ಒನಕೆ ಓಬವ್ವ ದೇವಸ್ಥಾನದಿಂದ ಪುಷ್ಪಾಲಂಕೃತ ಸಾರೋಟಿನಲ್ಲಿ ಓಬವ್ವಳ ಭಾವಚಿತ್ರದೊಂದಿಗೆ ವಿವಿಧ ಕಲಾತಂಡಗಳ ಮೆರವಣಿಗೆ ಹೊರಟು ರಂಗಮಂದಿರ ತಲುಪಲಿದ್ದು, ಹನ್ನೊಂದು ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ. ಛಲವಾದಿ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಜಯಂತಿಯನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

 

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಛಲವಾದಿ ಜನಾಂಗದ ಮಂಜುನಾಥ್ ಮಾತನಾಡಿ ಒಬವ್ವಳ ಜಯಂತಿ ಮೂಲಕ ಛಲವಾದಿ ಜನಾಂಗದವರು ಒಂದೆಡೆ ಸೇರಿ ಸಂಘಟನೆಯಾಗೋಣ. ಇದರಿಂದ ಮುಂದಿನ ಪೀಳಿಗೆಗೆ ಪರಂಪರೆಯನ್ನು ಉಳಿಸಿದಂತಾಗುತ್ತದೆಂದು ಸಲಹೆ ನೀಡಿದರು.

 

ಕೃಷಿ ಇಲಾಖೆ ನಿವೃತ್ತ ಉಪ ನಿರ್ದೇಶಕ ಛಲವಾದಿ ಸಮಾಜದ ವೆಂಕಟೇಶ್ ಮಾತನಾಡುತ್ತ ಒನಕೆ ಓಬವ್ವ ಜಯಂತಿಯಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಸಾಧಕರುಗಳನ್ನು ಗುರುತಿಸಿ ಸನ್ಮಾನಿಸೋಣ ಎಂದು ಹೇಳಿದರು.

 

ಪಿ.ವಿ.ಎಸ್.ಆಸ್ಪತ್ರೆಯ ಡಾ.ಪಿ.ವಿ.ಶ್ರೀಧರಮೂರ್ತಿ, ನ್ಯಾಯವಾದಿಗಳಾದ ಹೆಚ್.ಅಣ್ಣಪ್ಪಸ್ವಾಮಿ, ಎನ್.ಶಶಾಂಕ್, ಛಲವಾದಿ ಸಮಾಜದ ಮುಖಂಡರುಗಳಾದ ಬಾಳೆಕಾಯಿ ಶ್ರೀನಿವಾಸ್, ಎಸ್.ಎನ್.ರವಿಕುಮಾರ್, ನವೀನ್, ಶಿಕ್ಷಣ ಇಲಾಖೆಯ ನಾಗರಾಜ್, ಜಯರಾಂ ಕೆ. ಪರಮೇಶ್ವರಪ್ಪ ಪೂಜಾರ್, ಪ್ರದೀಪ್, ಸೋಮಣ್ಣ, ಹನುಮಂತಪ್ಪ, ಈರಜ್ಜನಹಟ್ಟಿ ತಿಪ್ಪೇಸ್ವಾಮಿ, ಜಗ್ಗಣ್ಣ, ರಂಗಸ್ವಾಮಿ ಸೇರಿದಂತೆ ಇನ್ನು ಅನೇಕರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...