Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ನವೆಂಬರ್ 11 ರಂದು ಉಚಿತ ಹೃದಯ ತಪಾಸಣಾ ಶಿಬಿರ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.08  : ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜ, ಎಸ್.ಎಸ್.ನಾರಾಯಣ ಆಸ್ಪತ್ರೆ ದಾವಣಗೆರೆ ಇವರ ಸಹಯೋಗದೊಂದಿಗೆ ನವೆಂಬರ್ 11 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಿಟಿ ಕ್ಲಬ್ ಬಿಲ್ಡಿಂಗ್‍ನಲ್ಲಿ ರೋಟರಿ ಬಾಲಭವನ ಹತ್ತಿರವಿರುವ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜ
ದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

 

ಎದೆನೋವು, ಉಸಿರಾಟದ ತೊಂದರೆ, ಅನಿಯಮಿತ ಹೃದಯ ಬಡಿತ, ಭಜದಲ್ಲಿ ನೋವು, ದುರ್ಬಲತೆ, ತಲೆಸುತ್ತುವಿಕೆ, ಬೆವರುವುದು, ವಾಕರಿಕೆಯಾಗುವ ಲಕ್ಷಣಗಳಿರುವವರು ತಪ್ಪದೆ ಉಚಿತ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಜಿ.ಚಿದಾನಂದಪ್ಪ, ಕಾರ್ಯದರ್ಶಿ ಡಿ.ಟಿ.ಶಿವಾನಂದಪ್ಪ ಇವರುಗಳು ಮನವಿ ಮಾಡಿದ್ದಾರೆ.

ಸುದ್ದಿಒನ್, ಚಿತ್ರದುರ್ಗ, ನವೆಂಬರ್.08  : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷರಾಗಿ ನಾಗರಾಜ ಸಂಗಮ್ ಮೂರು ವರ್ಷದ ಅವಧಿಗೆ ಮರು ನೇಮಕಗೊಂಡಿದ್ದಾರೆ.


ಐಶ್ವರ್ಯ ಫೋರ್ಟ್‍ನಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ್ ನಾಗರಾಜ ಸಂಗಮ್‍ರವರನ್ನು ಮರು ನೇಮಕಗೊಳಿಸಿದರು.

——————————–
ಸುದ್ದಿಒನ್, ಚಿತ್ರದುರ್ಗ : ಜಿಲ್ಲಾಸ್ಪತ್ರೆಯ ಆವರಣದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯೋರ್ವ ಮದ್ಯಪಾನ ಸೇವಿಸಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋದ ವ್ಯಕ್ತಿ ಚಿಕಿತ್ಸೆ ಕೊಡಿಸಿ ಒಳರೋಗಿಯಾಗಿ ದಾಖಲಿಸಿದ್ದ ಅಂದಾಜು 40 ವರ್ಷ ವಯಸ್ಸಿನ ಪುರುಷ ಮೃತಪಟ್ಟಿದ್ದಾನೆ.

ಸಾಧಾರಣ ಮೈಕಟ್ಟು, ಕೋಲು ಮುಖ, ಎಣ್ಣೆಗೆಂಪು ಬಣ್ಣ, ನೀಲಿ ಬಣ್ಣದ ಟೀಶರ್ಟ್, ಕಡು ನೀಲಿ ಕಪ್ಪುಬಣ್ಣದ ನೈಟ್ ಫ್ಯಾಂಟ್ ಧರಿಸಿರುತ್ತಾನೆ. ವಾರಸುದಾರರು ಯಾರಾದರು ಇದಲ್ಲಿ ಚಿತ್ರದುರ್ಗ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ನಗರ ಪೊಲೀಸ್ ಠಾಣೆ ಆರಕ್ಷಕ ಉಪ ನಿರೀಕ್ಷಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...