ಚಿತ್ರದುರ್ಗ ನ. 18 : ಇದೇ ನ. 21 ರಂದು ಹೊಸದುರ್ಗ ತಾಲ್ಲೂಕು ಅತ್ತಿಮಗ್ಗೆ ಗ್ರಾಮ ಹಾಗೂ ನ. 29 ರಂದು ಚಿತ್ರದುರ್ಗ ತಾಲ್ಲೂಕು ಕುರುಮರಡಿಕೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ತಾಲ್ಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸ್ಥಳೀಯವಾಗಿ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸುವಂತಾಗಲು ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ತ್ವರಿತವಾಗಿ ನಿವಾರಿಸುವ ಸಲುವಾಗಿ ಪ್ರತಿ ತಿಂಗಳು ಹದಿನೈದು ದಿನಗಳಿಗೊಮ್ಮೆ ಜಿಲ್ಲಾಧಿಕಾರಿಗಳು ತಾಲ್ಲೂಕು ಮಟ್ಟದ ಜನತಾದರ್ಶನ ಏರ್ಪಡಿಸುವಂತೆ ಸರ್ಕಾರ ನಿರ್ದೇಶನ ನೀಡಿದ್ದು,
ಇದರನ್ವಯ ನ. 21 ರಂದು ಬೆಳಿಗ್ಗೆ 10 ಗಂಟೆಗೆ ಹೊಸದುರ್ಗ ತಾಲ್ಲೂಕು ಅತ್ತಿಮಗ್ಗೆ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಹಾಗೂ ನ. 29 ರಂದು ಬೆ. 10 ಗಂಟೆಗೆ ಚಿತ್ರದುರ್ಗ ತಾಲ್ಲೂಕು ಇಂಗಳದಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುರುಮರಡಿಕೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲ್ಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ತಾಲ್ಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಸಾರ್ವಜನಿಕರಿಂದ ಅರ್ಜಿಗಳನ್ನು ಪಡೆದು, ಸ್ವೀಕೃತಿ ನೀಡುವ ಸಲುವಾಗಿ ಸಮರ್ಪಕ ರೀತಿಯಲ್ಲಿ ಕೌಂಟರ್ ಗಳ ವ್ಯವಸ್ಥೆ ಮಾಡಲಾಗುವುದು.
ಸಾರ್ವಜನಿಕರು ತಮ್ಮ ಕುಂದುಕೊರತೆ ಕುರಿತ ಅಹವಾಲು, ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…