ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. (ಅಕ್ಟೋಬರ್.11) : ಕುಂಚಿಟಿಗ ಸಮುದಾಯವನ್ನು ಕೇಂದ್ರ ಸರ್ಕಾರ ಓಬಿಸಿಗೆ ಸೇರಿಸುವಂತೆ ಆಗ್ರಹಿಸಿ ಇಂದಿನಿಂದ ಹಿರಿಯೂರಿನಿಂದ ಚಿತ್ರದುರ್ಗದವರೆಗೆ ಪಾದಯಾತ್ರೆಯನ್ನು ಪ್ರಾರಂಭಿಸಿದ್ದು, ಆ. 13 ರಂದು ಚಿತ್ರದುರ್ಗದಲ್ಲಿ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕಲಿಗೆ ಸಂಘದ ಪ್ರಧಾನ ಕಾರ್ಯದರ್ಶಿ ಜಗನ್ನಾಥ್ ತಿಳಿಸಿದ್ದಾರೆ.
ಚಿತ್ರದುರ್ಗ ನಗರದ ಒಕ್ಕಲಿಗ ಸಂಘದ ಆವರಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ 18 ಜಿಲ್ಲೆಗಳಲ್ಲಿ 46 ತಾಲ್ಲೂಕುಗಳಲ್ಲಿ 26 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಇದ್ದು ಸಮುದಾಯವನ್ನು ಕೇಂದ್ರ ಸರ್ಕಾರ ಓಬಿಸಿಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ 26 ವರ್ಷದಿಂದ ಹೋರಾಟ ನಡೆಯುತ್ತಿದೆ ಇದರ ಅಂಗವಾಗಿ ರಾಜ್ಯ ಸರ್ಕಾರ ಕುಂಚಿಟಿಗ ಕುಲ ಶಾಸ್ತ್ರ ಅಧ್ಯಯನ ವರದಿಯನ್ನು ತಯಾರಿಸಿ ಅದನ್ನು ರಾಜ್ಯ ಸಚಿವ ಸಂಪುಟದಲ್ಲಿ ಮಂಡಿಸಿ ಅನುಮೋದನೆಯನ್ನು ಮಾಡಲಾಗಿದೆ. ಈಗ ಕೇಂದ್ರ ಸರ್ಕಾರ ನಮ್ಮ ಸಮುದಾಯವನ್ನು ಓಬಿಸಿಗೆ ಸೇರ್ಪಡೆ ಮಾಡಬೇಕಿದೆ ಎಂದು ಆಗ್ರಹಿಸಿದರು.
ಈಗ ಕೇಂದ್ರ ಸರ್ಕಾರದ ಮುಂದೆ ನಮ್ಮ ಸಮುದಾಯವನ್ನು ಓಬಿಸಿಗೆ ಸೇರ್ಪಡೆ ಮಾಡಬೇಕಿದೆ. ಇದನ್ನು ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಚಿದಾನಂದ ಗೌಡ, ಜವಾಬ್ದಾರಿಯನ್ನು ತೆಗೆದುಕೊಂಡು ದೆಹಲಿ ವಿಶೇಷ ಪ್ರತಿನಿಧಿ ಜಯಚಂದ್ರ ಮಾರ್ಗದರ್ಶನದಲ್ಲಿ ಕೇಂದ್ರ ಸಚಿವರಾದ ನಾರಾಯಣಸ್ವಾಮಿ ಸಹಕಾರದೊಂದಿಗೆ ಮುಂಬರುವ 2024ರ ಲೋಕಸಭಾ ಚುನಾವಣೆಗೂ ಮುನ್ನಾ ಕೇಂದ್ರ ಸರ್ಕಾರದ ಓಬಿಸಿ ಮೀಸಲಾತಿ ಪಟ್ಟಿಯಲ್ಲಿ ಸೇರಿಸಬೇಕಿದೆ. ಇಂದಿನಿಂದ ಪ್ರಾರಂಭವಾಗಿರುವ ಪಾದಯಾತ್ರೆಯ ನೇತೃತ್ವವನ್ನು ಓಬಿಸಿ ಹೋರಾಟಗಾರರಾದ ಕಸವನಹಳ್ಳಿ ರಮೇಶ್ ಮತ್ತು ಕುಲಶಾಸ್ತ್ರ ಅಧ್ಯಯನಕಾರ ಎಸ್.ವಿ.ರಂಗನಾಥ್ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಆ. 11 ರ ಇಂದು ಬೆಳಿಗ್ಗೆ 6 ಗಂಟೆಯಿಂದ ಹಿರಿಯೂರಿನಿಂದ ಪಾದಯಾತ್ರೆ ಪ್ರಾರಂಭವಾಗಿದ್ದು, ಇಂದು ಸಂಜೆ ರಾ.ಹೆ.4ರ ಬುರುಜನರೂಪ್ಪ ಶ್ರೀ ರಕ್ಷಾ ಗಣಪತಿ ದೇವಸ್ಥಾನದಲ್ಲಿ ವಾಸ್ತವ್ಯ ಮಾಡಲಿದ್ದು ಆ. 12ರ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ಪಾದಯಾತ್ರೆ ಪ್ರಾರಂಭವಾಗಲಿದ್ದು, ಅಂದು ರಾತ್ರಿ ಚಿತ್ರದುರ್ಗದಲ್ಲಿ ವಾಸ್ತವ್ಯ ಮಾಡಲಿದ್ದು, ಆ. 13ರ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಕುಂಚಿಟಿಗ ಸಮುದಾಯವನ್ನು ಕೇಂದ್ರ ಸರ್ಕಾರ ಓಬಿಸಿಗೆ ಸೇರಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಿ ಮನವಿಯನ್ನು ಸಲ್ಲಿಸಲಾಗುವುದು ಎಂದು ಜಗನ್ನಾಥ್ ಹೇಳಿದರು.
ಗೋಷ್ಟಿಯಲ್ಲಿ ಅಧ್ಯಕ್ಷ ಜಿ.ಪಿ.ಚೇತನ, ಮಾಜಿ ಗೌರವಾದ್ಯಕ್ಷರಾದ ಹೆಚ್.ಆರ್.ತಿಮ್ಮಯ್ಯ, ಮಾಜಿ ಅಧ್ಯಕ್ಷರಾದ ಜಿ.ಹನುಮಂತಪ್ಪ, ಓ.ಎಲ್.ಜ್ಞಾನೇಶ್ವ ಕುಮಾರ್, ಸಹಾ ಕಾರ್ಯದರ್ಶಿ ಎಂ.ಡಿ.ಕುಮಾರ್, ನಿರ್ದೇಶಕರಾದ ಪರಮಶ್ವರ, ಚೇತನ, ರಂಗಧಾಮಯ್ಯ ವ್ಯವಸ್ಥಾಪಕರಾದ ನರೇಂದ್ರಬಾಬು ಉಪಸ್ಥಿತರಿದ್ದರು.