ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ಆಗಾಗ ಕಾಟ ಕೊಡ್ತಾನೆ ಇರುತ್ತೆ. ಇದೀಗ ಮತ್ತೆ ವಾಯು ಮಾಲಿನ್ಯ ಹೆಚ್ಚಾಗಿದ್ದು, ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರಕ್ಕೆ ಖಡಕ್ ಸೂಚನೆ ಕೊಟ್ಟಿದೆ.
ವಾಯು ಮಾಲಿನ್ಯ ಹೆಚ್ಚಾದ ಹಿನ್ನೆಲೆ ಎರಡು ದಿನಗಳ ಕಾಲ ಕಂಪ್ಲೀಟ್ ಲಾಕ್ಡೌನ್ ಮಾಡಲು ಸುಪ್ರೀಂ ಕೋರ್ಟ್ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರಕ್ಕೆ ಸೂಚಿಸಿದೆ. ವಾಯು ಮಾಲಿನ್ಯ ಮಿತಿ ಮೀರುತ್ತಿದ್ದ ಪರಿಣಾಮ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗುತ್ತಿದ್ದವು.
ಅದರಲ್ಲೂ 17 ವರ್ಷದ ವಿದ್ಯಾರ್ಥಿ ದುಬೆ ಎಂಬುವವರು ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಅರ್ಜಿ ವಿಚಾರಣೆ ಮಾಡಿದ ಸಿಜೆಐ ಎನ್ ವಿ ರಮಣ, ಡಿ ವೈ ಚಂದ್ರಚೂಡ ಮತ್ತು ನ್ಯಾಯಾಮೂರ್ತಿ ಸೂರ್ಯಕಾಂತ್ ಅವರಿದ್ದ ಪೀಠ, ಕೇಂದ್ರ ಸರ್ಕಾರ ಹಾಗೂ ದೆಹಲಿ ಎರಡು ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿತ್ತು.
ನಾವೂ ನಿತ್ಯ ನೋಡುತ್ತಿದ್ದೇವೆ. ಹೊರಗಿನ ಪರಿಸ್ಥಿತಿ ಎಷ್ಟು ಕೆಟ್ಟದಾಗಿದೆ ಎಂಬುದನ್ನು. ಮಾಸ್ಕ್ ಗಳನ್ನ ಮನೆಯೊಳಗೂ ಹಾಕಿಕೊಂಡೆ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹದಗೆಟ್ಟ ಗಾಳಿಯ ಗುಣಮಟ್ಟವನ್ನು ಸರಿಮಾಡಲು ಎರಡು ದಿನ ಸಂಪೂರ್ಣ ಲಾಕ್ಡೌನ್ ಮಾಡಲು ಸೂಚಿಸಿದೆ.