ಚಿತ್ರದುರ್ಗ ಸೆ. 06 : ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಸೆ. 08 ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದಾರೆ.
ಕೆ.ವಿ. ಪ್ರಭಾಕರ್ ಅವರು ಅಂದು ಬೆಳಿಗ್ಗೆ 11.30 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು, ಬಳಿಕ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಿಕಾ ಹಂಚಿಕೆದಾರರ/ವಿತರಕರ ಸಂಘದ ಸಹಯೋಗದಲ್ಲಿ ಮುರುಘಾ ಮಠದ ಅನುಭವ ಮಂಟಪದಲ್ಲಿ ನಡೆಯಲಿರುವ “ಪತ್ರಿಕಾ ವಿತರಕರ 4ನೇ ರಾಜ್ಯ ಸಮ್ಮೇಳನ” ದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 01 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮಾಧ್ಯಮ ಸಲಹೆಗಾರರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










