ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

1 Min Read

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ಈ ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಎಂಜಿನಿಯರ್(ಮೆಕಾನಿಕಲ್, ಎಲೆಕ್ಟ್ರಿಕಲ್&ಎಲೆಕ್ಟ್ರಾನಿಕ್ಸ್) ಎಎನ್‍ಎಮ್, ಜಿಎನ್‍ಎಮ್, ಬಿ.ಎಸ್ಸಿ ನರ್ಸಿಂಗ್ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತರು ಕನಿಷ್ಠ 8 ಸೆಟ್ ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಈ ಮೇಳದಲ್ಲಿ ಭಾಗವಹಿಸಬಹುದು.  ಹೆಚ್ಚಿನ ಮಾಹಿತಿಗೆ: 7483808321, 08192-259446 ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *