ಸುದ್ದಿಒನ್, ಚಿತ್ರದುರ್ಗ, ನವಂಬರ್.16 :ನಗರದ ಚಿತ್ರದುರ್ಗ ಡಯಾಬಿಟಿಕ್ ಸೆಂಟರ್ ನಲ್ಲಿ ವಿಶ್ವ ಮಧುಮೇಹ ದಿನದ ಪ್ರಯುಕ್ತ ಇಂದು (ನವೆಂಬರ್ 16 ನೇ ಗುರುವಾರ) ಬೆಳಗ್ಗೆ 10.00 ರಿಂದ ಸಂಜೆ 5.00ರ ವರೆಗೆ ಉಚಿತ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.
ಪದೇ ಪದೇ ಮೂತ್ರ ವಿಸರ್ಜನೆ ಮಾಡುವುದು, ಸುಸ್ತು, ಆಯಾಸ, ಕೈ ಕಾಲುಗಳಲ್ಲಿ ಜೋಮು, ತೂಕ ಕಡಿಮೆಯಾಗುವುದು, ದೃಷ್ಟಿ ಮಂಜಾಗುವುದು, ಅತಿಯಾದ ಬಾಯಾರಿಕೆ ಮತ್ತು ಹಸಿವು, ಈತರದ ಲಕ್ಷಣಗಳು ಕಂಡು ಬಂದರೆ ನಗರದ ಚಿತ್ರದುರ್ಗ ಡಯಾಬಿಟಿಕ್ ಸೆಂಟರ್ ನಲ್ಲಿ ಉಚಿತ ತಪಾಸಣೆ ಶಿಬಿರದ ಸದುಪಯೋಗ ಪಡಿಸಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ರದುರ್ಗ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ನಾಗರಿಕರು ಈ ಶಿಬಿರದ ಸದುಪಯೋಗವನ್ನು ಪಡೆಯಬೇಕೆಂದು ಕೋರಿದೆ.
ಶಿಬಿರದಲ್ಲಿ ದೊರೆಯುವ ಉಚಿತ ಸೌಲಭ್ಯಗಳು: ತಜ್ಞರೊಂದಿಗೆ ಸಮಾಲೋಚನೆ ಮತ್ತು ಸಕ್ಕರೆ ತಪಾಸಣೆ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9535178908
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












